March 29, 2026

ಭಟ್ಕಳದಲ್ಲಿ ಗ್ರಾಹಕರ ಜಾಗೃತಿ ಕಾರ್ಯಕ್ರಮ


ಭಟ್ಕಳ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಭಟ್ಕಳ ಹಾಗೂ ಗ್ರಾಹಕರ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಂಘಟಿತ ಒಕ್ಕೂಟ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಹಕರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಗ್ರಾಹಕರ ಶಕ್ತಿ ನಾನ್ ಪೊಲಿಟಿಕಲ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಆಡಳಿತ ಮಂಡಳಿ ಸದಸ್ಯರಾದ ಸೋಮಶೇಖರ್ ವಿಕೆ ಅವರು ಗಿಡಕ್ಕೆ ನೀರು ಎರಚುವ ಮೂಲಕ ಉದ್ಘಾಟಿಸಿದರು.


ನಂತರ ಮಾತನಾಡಿದ ಅವರು, ಗ್ರಾಹಕರ ಹಕ್ಕುಗಳ ರಕ್ಷಣೆಗಾಗಿ ದೂರುಗಳನ್ನು ಸಂಬಂಧಿತ ಸೇವಾ ಪ್ರತಿನಿಧಿಗಳಿಗೆ ಸಲ್ಲಿಸುವ ಅವಕಾಶವಿದ್ದು, ತಮ್ಮ ಪ್ರದೇಶದಲ್ಲಿನ ನೆಟ್‌ವರ್ಕ್ ಸಮಸ್ಯೆಗಳು ಹಾಗೂ ಇತರ ಮೊಬೈಲ್ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕಾಗಿ ಈ ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಿಎಸ್‌ಎನ್‌ಎಲ್ ಅಧಿಕಾರಿ ನಾಗರಾಜ ಅವರು, ಬಿಎಸ್‌ಎನ್‌ಎಲ್ ವತಿಯಿಂದ ಲಭ್ಯವಾಗುವ ವಿವಿಧ ಸೇವೆಗಳು ಹಾಗೂ ಸೌಲಭ್ಯಗಳ ಕುರಿತು ವಿವರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ನಾಗೇಶ ಶೆಟ್ಟಿ ಅವರು, ಗ್ರಾಹಕರ ಹಕ್ಕುಗಳ ಅರಿವು ಅತ್ಯಂತ ಅಗತ್ಯವಾಗಿದ್ದು, ಅದು ನಮ್ಮ ದೈನಂದಿನ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಐಕ್ಯೂಎಸಿ ಸಂಯೋಜಕ ಸುರೇಶ ಮೆಟಗಾರ, ಸಹಾಯಕ ಪ್ರಾಧ್ಯಾಪಕರಾದ ಅಣ್ಣಪ್ಪ ನಾಯ್ಕ ಮತ್ತು ಶ್ರೀಮತಿ ಮೋಹಿನಿ ಅತ್ತಿಮನಿ, ಒಕ್ಕೂಟದ ಸದಸ್ಯ ಮನೋಜ್ ಮುರುಡೇಶ್ವರ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಶ್ರೀಮತಿ ವೈಶಾಲಿ ಜಿ.ಆರ್ ಸ್ವಾಗತಿಸಿದರು. ಶ್ರೀಮತಿ ಸಂಗೀತ ಚಿಮ್ಮಣಿ ಅವರು ಅತಿಥಿಗಳ ಪರಿಚಯ ಮಾಡಿಸಿದರು. ಕುಮಾರಿ ಖುಷಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮಧನರಾಜ್ ಎನ್.ಎ ವಂದನಾರ್ಪಣೆ ಸಲ್ಲಿಸಿದರು.

About The Author

error: Content is protected !!