ಭಟ್ಕಳ: ತಾಲೂಕಿನ ಬೆಂಗ್ರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸ್ನೇಹ ಬಂಧು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಬೀನಾ ವೈದ್ಯ ಶಿಕ್ಷಣ ಸಂಸ್ಥೆ, ಮುರುಡೇಶ್ವರದ ವ್ಯವಸ್ಥಾಪಕ ನಿರ್ದೇಶಕಿ ಡಾ. ಪುಷ್ಪಲತಾ ಮಂಕಾಳ ವೈದ್ಯ ಮಾತನಾಡಿ, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸ್ವಾವಲಂಭಿ ಬದುಕು ಕಟ್ಟಿಕೊಳ್ಳುತ್ತಿರುವುದು ಗಮನಾರ್ಹ. ಮಹಿಳಾ ಒಕ್ಕೂಟಗಳು ವಿವಿಧ ಕಾರ್ಯಕ್ರಮಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುತ್ತಿರುವುದು ಶ್ಲಾಘನೀಯ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಹೇಮಾವತಿ ಮೊಗೇರ ಅವರು ಮಹಿಳೆಯರ ಆರೋಗ್ಯ, ಮುಟ್ಟಿನ ನೈರ್ಮಲ್ಯ, ವೈಯಕ್ತಿಕ ಸ್ವಚ್ಛತೆ ಹಾಗೂ ಅನಿಮಿಯಾ ಕುರಿತು ಜಾಗೃತಿ ಮೂಡಿಸಿದರು. ಅನಿಮಿಯಾ ತಡೆಯಲು ಸಮತೋಲನ ಆಹಾರ ಅವಶ್ಯಕತೆ ಕುರಿತು ಮಾಹಿತಿ ನೀಡಿದರು.
ಬ್ಯಾಂಕ್ ಆಫ್ ಬರೋಡಾ ಶಿರಾಲಿ ಶಾಖೆಯ ವ್ಯವಸ್ಥಾಪಕ ಶ್ರೀನಿಧಿ ಅವರು ಬ್ಯಾಂಕಿಂಗ್ ಸೇವೆಗಳ ಕುರಿತು ವಿವರಿಸಿದರು. ಗ್ರಾಮ ಆಡಳಿತಾಧಿಕಾರಿ ಲತಾ ನಾಯ್ಕ ಅವರು ಗ್ರಾಮೀಣ ಮಹಿಳೆಯರ ಸ್ಥಿತಿ-ಗತಿಗಳ ಕುರಿತು ಮಾತನಾಡಿದರು. ಬೆಂಗ್ರೆ ಗ್ರಾಮ ಪಂಚಾಯತ್ ಪಿ.ಡಿ.ಓ ರಮೇಶ ನಾಯ್ಕ ಅವರು ಪಂಚಾಯತ್ ಮೂಲಕ ಲಭ್ಯವಿರುವ ಸೌಲಭ್ಯಗಳನ್ನು ವಿವರಿಸಿದರು.
ಒಕ್ಕೂಟದ ಅಧ್ಯಕ್ಷೆ ಮೋಹಿನಿ ಮೊಗೇರ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶಾಂತಿಕಾ ನಾಯಕ, ವಲಯ ಮೇಲ್ವಿಚಾರಕ ಗೋಪಾಲ ನಾಯ್ಕ ಸೇರಿದಂತೆ ವೆಂಕಟೇಶ ದೇವಡಿಗ, ದಿವ್ಯಾ ಶೆಟ್ಟಿ, ಉಷಾ ದೇವಡಿಗ, ಗೌತಮಿ ಬಾಗಲ್ ಹಾಗೂ ಸದಸ್ಯರು, ಸಿಬ್ಬಂದಿ, ಸ್ವಸಹಾಯ ಸಂಘಗಳ ಮಹಿಳೆಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಸನ್ಮಾನಿಸಲಾಯಿತು. ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬಳಿಕ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಮೇಘನಾ ಕಾಜುಮನೆ ಸ್ವಾಗತಿಸಿದರು. ತನುಜಾ ನಾಯ್ಕ ವರದಿ ವಾಚಿಸಿದರು. ಜ್ಯೋತಿ ದೇವಡಿಗ ನಿರೂಪಣೆ ಮಾಡಿದರು. ಭವಾನಿ ಮೊಗೇರ ವಂದಿಸಿದರು.

More Stories
ಭಟ್ಕಳದಲ್ಲಿ ಗ್ರಾಹಕರ ಜಾಗೃತಿ ಕಾರ್ಯಕ್ರಮ
ಮುಖ್ಯಮಂತ್ರಿ ಬಂಗಾರದ ಪದಕಕ್ಕೆ ಭಟ್ಕಳ ಪಿ.ಎಸ್.ಐ. ನವೀನ್ ನಾಯ್ಕ ಆಯ್ಕೆ
ಭಟ್ಕಳದಲ್ಲಿ ಚಾಕು ಇರಿತ: ಹಾರ್ನ್ ವಿಚಾರದಿಂದ ಆರಂಭವಾದ ವಾಗ್ವಾದ ಗಂಭೀರ ಹಲ್ಲೆ