April 4, 2026

ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ವತಿಯಿಂದ ಉಚಿತ ಫ್ಯಾಷನ್ ಡಿಸೈನಿಂಗ್ ತರಬೇತಿ ಸಮಾಪ್ತಿ

ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಕಾರ್ಕಳ : ಸ್ಥಳೀಯವಾಗಿ ಪ್ರಸಿದ್ಧವಾದ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ವತಿಯಿಂದ ಆಯೋಜಿಸಲಾದ ಉಚಿತ ಫ್ಯಾಷನ್ ಡಿಸೈನಿಂಗ್ ಒಂದು ವಾರದ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಸಮಾರಂಭವನ್ನು ಭಾವಪೂರ್ಣವಾಗಿ ನಡೆಸಲಾಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲೆಕ್ಕ ಪರಿಶೋಧಕರಾದ ಸಿ.ಎ. ಕಮಲಾಕ್ಷ ಕಾಮತ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂತಹ ತರಬೇತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸ್ವಯಂ ಉದ್ಯೋಗದ ಮನೋಭಾವ ಬೆಳೆಸಲು ಸಹಾಯಕವಾಗುತ್ತವೆ ಎಂದು ಹೇಳಿದರು.
ನಕ್ರೆ ಮಹಾಲಿಂಗೇಶ್ವರ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪ್ರೀತಿ ವಾತ್ಸಲ್ಯ ಅವರು ವಿದ್ಯಾರ್ಥಿಗಳಿಗೆ ಶುಭಾಶಯ ತಿಳಿಸಿ, ಕಲಿತ ಕೌಶಲ್ಯವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸಿದರು.


ಸಂಸ್ಥೆಯ ಸಂಸ್ಥಾಪಕಿ ಸಾಧನಾ ಆಶ್ರಿತ್ ಅವರು ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಆಶಯ ವ್ಯಕ್ತಪಡಿಸಿದರು. ವಿಶೇಷ ಶಿಕ್ಷಕಿಯರಾದ ಸೌಜನ್ಯ ಮತ್ತು ಸಂಜನಾ ಅವರು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಸಂಜನಾ ಅವರು ನಿರೂಪಣೆ ಮಾಡಿದರು. ಕಾವ್ಯಾ ನಾಯಕ್ ಸ್ವಾಗತಿಸಿದರು. ಶ್ವೇತಾ ವಂದಿಸಿದರು.ಈ ಸಂದರ್ಭದಲ್ಲಿ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮವು ಉತ್ಸಾಹಭರಿತವಾಗಿ ಮತ್ತು ಸಾರ್ಥಕವಾಗಿ ನೆರವೇರಿತು.

ವರದಿ  : ಅರುಣ ಭಟ್ ಕಾರ್ಕಳ

About The Author

error: Content is protected !!