ಭಟ್ಕಳ: ಮೀನುಗಾರಿಕೆಗೆ ತೆರಳಿದ ವೇಳೆ ಕಾಲು ಜಾರಿ ಸಮುದ್ರಕ್ಕೆ ಬಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಅಳೇಕೋಡಿ ಬಂದರಿನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಒಡಿಶಾ ರಾಜ್ಯದ ಸುಂದರಗಢ ಜಿಲ್ಲೆಯ 27 ವರ್ಷದ ಜೈರಾಮ್ ಬಿರಗಂಟಿ ನಾಪತ್ತೆಯಾದ ಯುವಕನಾಗಿದ್ದಾನೆ. ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಜನಾಬಾಯಿ ಅವರಿಗೆ ಸೇರಿದ ‘ಶ್ರೀ ಮುಖಾಂಬಿಕಾ’ ಬೋಟ್ ಹತ್ತುವ ವೇಳೆ ಕಾಲು ಜಾರಿ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಬಳಿಕ ಸ್ಥಳೀಯರು ತಕ್ಷಣ ಶೋಧ ಕಾರ್ಯಾಚರಣೆ ನಡೆಸಿದರೂ ಯುವಕ ಪತ್ತೆಯಾಗಿಲ್ಲ. ಈ ಸಂಬಂಧ ದುಲವ ತಂದೆ ಗೋವರ್ಧನ ಆಡಾ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾದ ಯುವಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

More Stories
ಅತ್ಯುತ್ತಮ ಸೇವೆ: ನವೀನ್ ನಾಯ್ಕರಿಗೆ ಮುಖ್ಯಮಂತ್ರಿ ಪದಕ ಪ್ರದಾನ
ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಮೂವರು ಬಂಧನ
ಶ್ರೀ ಚಿತ್ರಾಪುರ ಮಠದಲ್ಲಿ ಭವಾನಿಶಂಕರ ದೇವರ ರಥೋತ್ಸವ ವೈಭವ