ಭಟ್ಕಳ: ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ವಶಕ್ಕೆ ಪಡೆದ ಘಟನೆ ನಡೆದಿದೆ.
ತಾಲೂಕಿನ ಹೆಬಳೆ ಜಾಮೀಯಾಬಾದ ಹಾಗೂ ವೆಂಕಟಾಪುರದ ಜಾಗಟೆಬೈಲ್ ಮೈದಾನದ ಸಮೀಪ ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರು ಆಸಿಫ್ ಕೆ.ಎ. (26) ಹೆಬಳೆ ಜಾಮೀಯಾಬಾದ ನಿವಾಸಿ, ಬಿಲಾಲ್ ಅಹ್ಮದ್ (36) ಮದೀನಾ ಕಾಲೋನಿಯ ಉಮ್ಮರ್ ಸ್ಟ್ರೀಟ್ ನಿವಾಸಿ ಹಾಗೂ ಮಹಮ್ಮದ್ ರಸೂಲ್ (34) ಜಾಲಿ ತಗ್ಗರಗೋಡು ನಿವಾಸಿಗಳಾಗಿದ್ದಾರೆ.
ಸಂಶಯಾಸ್ಪದವಾಗಿ ವರ್ತಿಸುತ್ತಿದ್ದ ಇವರನ್ನು ಪೊಲೀಸರು ತಪಾಸಣೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ಪತ್ತೆಯಾಗಿದೆ. ಬಳಿಕ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿಯೂ ಗಾಂಜಾ ಸೇವನೆ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನ ಕೊರಾಣಿ ಹಾಗೂ ಪಿಎಸ್‌ಐ ಭರಮಪ್ಪ ಬೆಳಗಲಿ ಸರ್ಕಾರದ ಪರವಾಗಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

More Stories
ಭಟ್ಕಳ ನ್ಯೂ ಇಂಗ್ಲಿಷ್ ಶಾಲೆ ಪೂರ್ವ ವಿದ್ಯಾರ್ಥಿಗಳ ಸಮಾಗಮ ಏ.29ರಂದು
ಮಣ್ಕುಳಿ ಪ್ರೀಮಿಯರ್ ಲೀಗ್–2026: ರಾಯಲ್ ಸಾಮ್ರಾಟ್ ಚಾಂಪಿಯನ್
ಮೀನುಗಾರಿಕೆಗೆ ತೆರಳಿದ ವ್ಯಕ್ತಿ ಸಮುದ್ರದಲ್ಲಿ ಮುಳುಗಿ ಸಾವು