ಭಟ್ಕಳ: ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಮಟ್ಕಾ ಜೂಜಾಟ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಭಟ್ಕಳ ನಗರದ ಶಂಸುದ್ದೀನ್ ಸರ್ಕಲ್ ಬಳಿ ಅಶೋಕ್ ಮಂಜುನಾಥ ನಾಯ್ಕ (34) ಹಾಗೂ ಮುರುಡೇಶ್ವರ ಮುಖ್ಯರಸ್ತೆಯ ದೀಪಕ್ ಮಂಜುನಾಥ ನಾಯ್ಕ (30) ಬಂಧಿತ ಆರೋಪಿಗಳಾಗಿದ್ದಾರೆ. ಇವರು ಸಾರ್ವಜನಿಕರಿಂದ ಹಣ ಪಡೆದು ಜೂಜಾಟ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ ನಗದು ಹಾಗೂ ಜೂಜಾಟಕ್ಕೆ ಬಳಸುತ್ತಿದ್ದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಭಟ್ಕಳ ನಗರ ಹಾಗೂ ಮುರುಡೇಶ್ವರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ