ಮುರ್ಡೇಶ್ವರ: ಬೀನಾ ವೈದ್ಯ ಶಿಕ್ಷಣ ಸಂಸ್ಥೆಯಲ್ಲಿ ತೃತೀಯ ವರ್ಷದ “ಅಕ್ಷರ ಪರ್ವ2026” ಸ್ಕಾಲರ್‌ಶಿಪ್ ಪರೀಕ್ಷೆ ನಡೆಯಲಿದ್ದು, ಪರಿಕ್ಷೆಯಲ್ಲಿ ಉತ್ತೀರ್ಣರಾದ ಆಯಾ ವಿಭಾಗದ ಟಾಪ್ 10 ವಿದ್ಯಾರ್ಥಿಗಳಿಗೆ ಉಚಿತವಾದ ಶಿಕ್ಷಣ ದೊರೆಯಲಿದೆ.

ಫ್ರೌಢಾಶಾಲಾ ವಿಭಾಗದಲ್ಲಿ 8,9,10 ನೇ ತರಗತಿಯ ವಿದ್ಯಾರ್ಥಿಗಳಿಗೆ ಹಾಗೂ ಪಿಯುಸಿ ಕಾಮರ್ಸ್ ಹಾಗೂ ಸೈನ್ಸ್ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆಗೆ ಭಾಗವಹಿಸಬಹುದಾಗಿದೆ. ಪರೀಕ್ಷೆಯ ದಿನಾಂಕ 12.04.2026 ರವಿವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದ್ದು ಒಟ್ಟು ಅಂಕಗಳು 40, ಪ್ರಸ್ತುತ ಪಠ್ಯ 20 ಅಂಕಗಳು, ಸಾಮಾನ್ಯ ಜ್ಞಾನ 10 ಅಂಕಗಳು ಹಾಗೂ ಬರವಣೆಗೆ 10 ಅಂಕೆಗಳಾಗಿರುತ್ತವೆ. ಈಗಾಗಲೇ ಸುಮಾರು 150 ಕ್ಕೂ ಹೆಚ್ಚು ವಿದ್ಯಾರ್ಥಿ ಇದರ ಲಾಭ ಪಡೆದಿರುತ್ತಾರೆ.
ಗುಣಮಟ್ಟದ ಶಿಕ್ಷಣದಿಂದ ಪ್ರತೀಭಾನ್ವಿತಾ ವಿದ್ಯಾರ್ಥಿಗಳು ವಂಚಿತರಾಗಬಾರದು, ಶಿಕ್ಷಣವು ಪ್ರತಿಯೊಂದು ಮಗುವಿನ ಹಕ್ಕು, ಜೀವನಕ್ಕಾಗಿ ಶಿಕ್ಷಣ ಉತ್ಕೃಷ್ಠತೆಗಾಗಿ ಪ್ರಯತ್ನ ಎಂಬ ಧ್ಯೇಯದೊಂದಿಗೆ ಶ್ರೇಷ್ಠ ಸಮಾಜದ ನಿರ್ಮಾಣಕ್ಕಾಗಿ ಸಂಸ್ಥಯು ಶಿಕ್ಷಣಕ್ಕೆ ಒತ್ತು ನೀಡುವುದಕ್ಕಾಗಿ ಸ್ಕಾಲರ್‌ಶಿಪ್ ಪರೀಕ್ಷೆಯನ್ನು ನಡೆಸುತ್ತಿದ್ದು ಇದರ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕಾಗಿ ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಮಾನ್ಯ ಸಚಿವರು ಮೀನುಗಾರಿಕೆ, ಬಂದರು ಒಳನಾಡು ಜಲಸಾರಿಗೆ ಇಲಾಖೆ ಕರ್ನಾಟಕ ಸರ್ಕಾರ ಹಾಗೂ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಆದ ಶ್ರೀ ಮಂಕಾಳ್ ಎಸ್ ವೈದ್ಯರವರು, ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ಟ್ರಸ್ಟಿ, ಆಡಳಿತ ನಿರ್ದೇಶಕಿಯವರಾದ ಡಾ.ಪುಷ್ಪಲತಾ ಮಂಕಾಳ್ ವೈದ್ಯರವರು ಈ ಮೂಲಕ ಕೊರಿದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಛೇರಿಯನ್ನು ಸಂಪರ್ಕಿಸಿ: 9449107704
About The Author


More Stories
ಮುರ್ಡೇಶ್ವರದಲ್ಲಿ ಭವ್ಯ ಬಿಲ್ವಾರ್ಚನೆ: 2 ಸಾವಿರಕ್ಕೂ ಅಧಿಕ ಭಕ್ತರು ಭಾಗಿ
ಭಟ್ಕಳದಲ್ಲಿ ಮನೆಯ ಶೆಡ್ನಿಂದ ಹೋಂಡಾ ಸ್ಕೂಟಿ ಕಳವು
ದೇಶಸೇವೆಯೊಂದಿಗೆ ಸಮಾಜಮುಖಿ ಕಾರ್ಯದಲ್ಲಿ ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ: ಮುರ್ಡೇಶ್ವರ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ