ಭಟ್ಕಳ: ತಾಲೂಕಿನ ಪಿ.ಯು ನ್ಯೂ ಇಂಗ್ಲಿಷ್ ಕಾಲೇಜಿನ ವಿದ್ಯಾರ್ಥಿನಿ ಸಂಜನಾ ನಾಯ್ಕ್ ರಾಜ್ಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 593 ಅಂಕ (98.83%) ಗಳಿಸಿ 8ನೇ ರ್ಯಾಂಕ್ ಪಡೆದಿದ್ದಾಳೆ.
ಚಿತ್ರಾಪುರ–ಶಿರಾಲಿ ನಿವಾಸಿಯಾಗಿರುವ ಸಂಜನಾ ಗ್ರಾಮೀಣ ಹಿನ್ನೆಲೆಯ ನಡುವೆಯೇ ಈ ಸಾಧನೆ ಮಾಡಿರುವುದು ವಿಶೇಷವಾಗಿದೆ. ಸೀಮಿತ ಸಂಪನ್ಮೂಲಗಳ ನಡುವೆಯೂ ನಿರಂತರ ಪರಿಶ್ರಮ ಹಾಗೂ ದೃಢ ಸಂಕಲ್ಪದಿಂದ ಉನ್ನತ ಸಾಧನೆ ತಲುಪಿರುವುದು ಗಮನಾರ್ಹ.
ಸಂಜನಾ ಸಾಧನೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು, ಹೆಣ್ಣುಮಕ್ಕಳು ಕೂಡ ಶಿಕ್ಷಣ ಕ್ಷೇತ್ರದಲ್ಲಿ ಉನ್ನತ ಮಟ್ಟ ತಲುಪಬಹುದೆಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
ವಿದ್ಯಾರ್ಥಿನಿಯ ಮುಂದಿನ ವಿದ್ಯಾಭ್ಯಾಸಕ್ಕೂ ಯಶಸ್ಸು ಸಿಗಲಿ ಎಂದು ಶಿಕ್ಷಕರು, ಪೋಷಕರು ಹಾಗೂ ಸ್ಥಳೀಯರು ಹಾರೈಸಿದ್ದಾರೆ.
About The Author


More Stories
ಮೈಸೂರು ದಸರಾ ಕ್ರೀಡಾಕೂಟ: ಕರಾಟೆಯಲ್ಲಿ ಕಂಚಿನ ಪದಕ ಗೆದ್ದ ಭಟ್ಕಳದ ಪ್ರವೀಣ್ ಹರಿಜನ್
ನಾಗ ಮಾಸ್ತಿ ಕ್ಷೇತ್ರದಲ್ಲಿ ವೈಭವದ ಮಹಿಳಾ ದಸರಾ; ಪ್ರತಿಭೆ ಅನಾವರಣಕ್ಕೆ ವೇದಿಕೆ
ನಾಗ ಮಾಸ್ತಿ ಕ್ಷೇತ್ರದಲ್ಲಿ ಸಾಂಸ್ಕೃತಿಕ ವೇದಿಕೆಗೆ ಚಾಲನೆ; ಸನಾತನ ಸಂಸ್ಕೃತಿ ರಕ್ಷಣೆಗೆ ಒತ್ತು