ಹೊನ್ನಾವರ: ತಾಲೂಕಿನ ಸಾಲ್ಕೋಡ್ ಗ್ರಾ.ಪಂ. ವ್ಯಾಪ್ತಿಯ ಅರೇಅಂಗಡಿ ಸಮೀಪದ ಗೇರು ಪ್ಯಾಂಟಿಶನ್ ಪ್ರದೇಶದಲ್ಲಿ ಚಿರತೆಯೊಂದು ಉರುಳಿಗೆ ಸಿಲುಕಿ ಒದ್ದಾಡುತ್ತಿರುವ ಘಟನೆ ರವಿವಾರ ಮುಂಜಾನೆ ಬೆಳಕಿಗೆ ಬಂದಿದೆ.
ಕಾಡುಪ್ರಾಣಿಗಳಿಂದ ರಕ್ಷಣೆಗಾಗಿ ಅಳವಡಿಸಿದ ಉರುಳಿಗೆ ಸಿಲುಕಿದ ಕಪ್ಪು ಬಣ್ಣದ ಚಿರತೆಯು ತೀವ್ರ ಚಿರಾಟ ನಡೆಸುತ್ತಿತ್ತು. ಚಿರಾಟದ ಶಬ್ದ ಕೇಳಿದ ಸ್ಥಳೀಯರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಸುರಕ್ಷಿತವಾಗಿ ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಚಿರತೆಯನ್ನು ನೋಡಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ, ಪ್ರಾಣಿಯ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಜನರನ್ನು ದೂರವಿಡುವ ಕ್ರಮ ಕೈಗೊಂಡಿದ್ದಾರೆ.
ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಚಿರತೆಯ ರಕ್ಷಣಾ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಅದನ್ನು ಸುರಕ್ಷಿತವಾಗಿ ಕಾಡಿಗೆ ಬಿಡುವ ನಿರೀಕ್ಷೆಯಿದೆ.
ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ
About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ