ಸಿದ್ದಾಪುರ: ಕೇಂದ್ರ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಐ.ಎ.ಎಸ್ ಅಧಿಕಾರಿ ತೇಜಸ್ವಿ ನಾಯ್ಕ ಅವರಿಗೆ ಕೇಂದ್ರ ಕಾರ್ಮಿಕ ಮತ್ತು ಸಬಲೀಕರಣ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ಪದೋನ್ನತಿ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಮೂಲದ ಹಾಗೂ ಹಾಲಿ ಶಿರಸಿ ನಿವಾಸಿಯಾಗಿರುವ ಅವರು 2009 ಕೆಡರ್‌ನ ಮಧ್ಯಪ್ರದೇಶದ ಐ.ಎ.ಎಸ್ ಅಧಿಕಾರಿಯಾಗಿದ್ದಾರೆ. ಮಧ್ಯಪ್ರದೇಶದಲ್ಲಿ ದಕ್ಷ ಹಾಗೂ ಖಡಕ್ ಅಧಿಕಾರಿಯಾಗಿ ಹೆಸರು ಮಾಡಿರುವ ಅವರು ಜಾರಿಗೆ ತಂದ ಜಲಮಿಷನ್ ಯೋಜನೆಗೆ ಅಂತರಾಷ್ಟ್ರೀಯ ಮನ್ನಣೆ ದೊರೆತಿದ್ದು, ಅವರ ಕಾರ್ಯಕ್ಷಮತೆಗೆ ಸಾಕ್ಷಿಯಾಗಿದೆ.
ಈ ಹಿಂದೆ ಕೇಂದ್ರ ಕೃಷಿ ಸಚಿವ ಅರ್ಜುನ ಮುಂಡಾ ಅವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಅನುಭವದ ಆಧಾರದಲ್ಲಿ ಕೇಂದ್ರ ಸರ್ಕಾರವು ಅವರಿಗೆ ಈ ಮಹತ್ವದ ಹುದ್ದೆಯನ್ನು ನೀಡಿ ಗೌರವಿಸಿದೆ.

ಇದಲ್ಲದೆ, ಅವರ ಪತ್ನಿ ಸ್ವಾತಿಮೀನಾ ನಾಯ್ಕ ಕೂಡ ಐ.ಎ.ಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ