ಭಟ್ಕಳ: ಕರಾವಳಿ ಭಾಗ ಸೇರಿದಂತೆ ತಾಲೂಕಿನಲ್ಲಿ ದಿನೇದಿನೇ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ತೀವ್ರತೆಗೆ ಮನುಷ್ಯರ ಜೊತೆಗೆ ಪ್ರಾಣಿ-ಪಕ್ಷಿಗಳು ಕೂಡ ತತ್ತರಿಸುತ್ತಿವೆ.
ಈ ಹಿನ್ನೆಲೆ, ನೀರಿಗಾಗಿ ಹಾತೊರೆಯುತ್ತಿರುವ ಪಕ್ಷಿಗಳು ಹಾಗೂ ಮೂಕ ಪ್ರಾಣಿಗಳಿಗೆ ನೆರವಾಗುವಂತೆ ಸಾರ್ವಜನಿಕರಿಗೆ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಹಾಗೂ ಭಟ್ಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ನಿರ್ದೇಶಕಿ ಬೀನಾ ಮಂಕಾಳ ವೈದ್ಯ ಮನವಿ ಮಾಡಿದ್ದಾರೆ.

ಮನೆಯ ಮುಂದೆ, ಬಾಲ್ಕನಿ ಹಾಗೂ ರಸ್ತೆ ಬದಿಗಳಲ್ಲಿ ನೀರಿನ ಪಾತ್ರೆಗಳನ್ನು ಇಡುವ ಮೂಲಕ ಪ್ರಾಣಿ-ಪಕ್ಷಿಗಳ ದಾಹ ನೀಗಿಸಬಹುದಾಗಿದೆ. ಸಣ್ಣ ಪ್ರಯತ್ನವೂ ಜೀವ ಉಳಿಸುವ ಮಹತ್ವದ ಕಾರ್ಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಬಿಸಿಲಿನಲ್ಲಿ ಅಲೆಯುವ ಮೂಕ ಪ್ರಾಣಿಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮನುಷ್ಯರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಬಲ್ಲರು, ಆದರೆ ಈ ಜೀವಿಗಳು ಅನುಭವಿಸುವ ಬಾಯಾರಿಕೆ ಮತ್ತು ಬಿಸಿಲಿನ ತೀವ್ರತೆಯನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ತಾಲೂಕಿನ ಪ್ರತಿಯೊಬ್ಬ ನಾಗರಿಕರೂ ಈ ಅಭಿಯಾನದಲ್ಲಿ ಭಾಗವಹಿಸಿ ಪ್ರಾಣಿ ಸಂಕುಲದ ರಕ್ಷಣೆಗೆ ಕೈಜೋಡಿಸಬೇಕೆಂದು ಕೋರಿದ್ದಾರೆ


More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ