ಹೊನ್ನಾವರ: ಪಟ್ಟಣದ ಬಸ್‌ಸ್ಟ್ಯಾಂಡ್ ರಸ್ತೆಯಲ್ಲಿರುವ ಎ.ಆರ್.ಎಮ್ ಸೂಪರ್ ಮಾರ್ಕೆಟ್‌ನಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಹೊನ್ನಾವರ ಪೊಲೀಸರು ಕೇವಲ 48 ಗಂಟೆಗಳಲ್ಲೇ ಬಗೆಹರಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಏಪ್ರಿಲ್ 16ರಂದು ಪ್ರಕರಣ ದಾಖಲಾಗುತ್ತಿದ್ದಂತೆಯೇ ಪೊಲೀಸರು ತೀವ್ರ ತನಿಖೆ ಕೈಗೊಂಡರು. ಉತ್ತರಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಭಟ್ಕಳ ಉಪವಿಭಾಗದ ಡಿವೈಎಸ್ಪಿ ಗಿರೀಶ್ ಬಿ., ಸಿಪಿಐ ಸಿದ್ದರಾಮೇಶ್ವರ ಎಸ್. ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಯಿತು.
ಪಿ.ಎಸ್.ಐ ಮಹಾಂತೇಶ ವಾಲ್ಮೀಕಿ ಹಾಗೂ ಮಂಜುನಾಥ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ತಂಡ, ಜಿಲ್ಲಾ ಬೆರಳಚ್ಚು ವಿಭಾಗದ ಸಹಕಾರದೊಂದಿಗೆ ಆರೋಪಿಯ ಸುಳಿವು ಪತ್ತೆಹಚ್ಚಿತು.

ಕುಮಟಾದ ಸಿತಾರಾ ಹೋಟೆಲ್ ಎದುರು ಮುಜಾಫರ್ ಶೇಖ್ (27), ದಾಂಡೇಲಿ ಸುಭಾಷನಗರ ನಿವಾಸಿ, ಈತನನ್ನು ಬಂಧಿಸಿ, ಕಳುವಾದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ವೇಗವಾಗಿ ಪ್ರಕರಣ ಭೇದಿಸಿರುವ ಪೊಲೀಸರ ಕಾರ್ಯಕ್ಷಮತೆಯನ್ನು ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

More Stories
ಹೊನ್ನಾವರದಲ್ಲಿ ಜುಲೈ 26ರಂದು ‘ಕಾರ್ಗಿಲ್ ವಿಜಯ ದಿವಸ’: ಬೃಹತ್ ರ್ಯಾಲಿ ಹಾಗೂ ಹುತಾತ್ಮ ಯೋಧರಿಗೆ ಪುಷ್ಪನಮನ ಕಾರ್ಯಕ್ರಮ
ಕ್ರೀಡಾಕೂಟದಲ್ಲಿ ಮಂಕಿಯ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಅದ್ಭುತ ಸಾಧನೆ:
ಕಿಸಾ (KISA) ಯೋಗ ಸ್ಪರ್ಧೆ: ಮಂಕಿಯ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಗೆ ಪ್ರಥಮ ಸ್ಥಾನ