ಭಟ್ಕಳ: ಎರಡು ರಾಯಲ್ ಎನ್‌ಫೀಲ್ಡ್ ಮೋಟಾರ್ ಬೈಕ್‌ಗಳು ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ ಹೊಡೆದುಕೊಂಡ ಪರಿಣಾಮವಾಗಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸಂಸುದ್ದೀನ್ ಸರ್ಕಲ್ ಸಮೀಪ ನಡೆದಿದೆ.
ಗಾಯಗೊಂಡವರನ್ನು ಕೇರಳದ ಎರ್ನಾಕುಲಂ ನಿವಾಸಿ ಮನೋಜ್ ಸೈಬಿಯಾ (50) ಹಾಗೂ ಮಂಗಳೂರು ಸುರತ್ಕಲ್‌ನ ಜಲೀಲ್ (40) ಎಂದು ಗುರುತಿಸಲಾಗಿದೆ. ಮನೋಜ್ ಅವರ ಬಲಗಾಲು ಹಾಗೂ ಮುಖ ಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಮ್‌ಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅವರು ಗೋವಾದಿಂದ ಎರ್ನಾಕುಲಂ ಕಡೆಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಇನ್ನೊಂದು ಬೈಕ್‌ನ ಸವಾರನಿಗೂ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ ಆಸ್ಪತ್ರೆಗೆ ರವಾನಿಸಲಾಗಿದೆ. ಈತನ ಮೇಲೆ ಅಪರಾಧ ಪ್ರಕರಣವೊಂದರ ಆರೋಪವಿದ್ದು, ಭಟ್ಕಳ ನ್ಯಾಯಾಲಯಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
About The Author


More Stories
AITM ಭಟ್ಕಳದಲ್ಲಿ IPR ಮತ್ತು ಪೇಟೆಂಟ್ಗಳ ಕುರಿತು ರಾಷ್ಟ್ರೀಯ ಮಟ್ಟದ ಆನ್ಲೈನ್ ಕಾರ್ಯಾಗಾರ
ಸತತ 5ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗೆದ್ದ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜು
ಯಶಸ್ವಿಯಾಗಿ ನಡೆದ ಶಿರಾಲಿ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ: ಜನತಾ ವಿದ್ಯಾಲಯ ಸಮಗ್ರ ವೀರಾಗ್ರಣಿ