ಭಟ್ಕಳ: ಸೋನಾರಕೇರಿಯಲ್ಲಿ ನಿರ್ಮಿಸಲಾದ ಸಿದ್ದಾರ್ಥ ಪಿ.ಯು ಕಾಲೇಜಿನ ಉದ್ಘಾಟನಾ ಸಮಾರಂಭವು ಏಪ್ರಿಲ್ ೨೬ರಂದು ಸರಸ್ವತಿ ಪೂಜೆಯೊಂದಿಗೆ ವೈಭವವಾಗಿ ನಡೆಯಲಿದೆ ಎಂದು ಪ್ರಾಂಶುಪಾಲೆ ಅರ್ಚನಾ ನಾಯ್ಕ ತಿಳಿಸಿದ್ದಾರೆ.
ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಾಲೇಜಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳನ್ನು ಇದೇ ಕ್ಯಾಂಪಸ್‌ನಲ್ಲಿ ಆರಂಭಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಮುನ್ನಡೆಯಲು ಪ್ರೇರೇಪಿಸಲಾಗುತ್ತದೆ ಎಂದರು.
ಎಂಬಿಬಿಎಸ್, ಬಿಡಿಎಸ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯುವಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ಸಿಇಟಿ ಪರೀಕ್ಷೆಯಲ್ಲಿ ರೋಹಿತ್ ಮಲ್ಯಾ ೭೦೦ನೇ ರ‍್ಯಾಂಕ್ ಗಳಿಸಿದ್ದು, ೫೦ ವಿದ್ಯಾರ್ಥಿಗಳು ೫೦೦೦ರೊಳಗೆ ಸ್ಥಾನ ಪಡೆದಿರುವುದು ಗಮನಾರ್ಹ ಸಾಧನೆಯಾಗಿದೆ ಎಂದು ತಿಳಿಸಿದರು.
ಪ್ರಸ್ತುತ ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳಲ್ಲಿ ಸುಮಾರು ೮೫೦ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಅವರಿಗೆ ಸಮರ್ಪಕ ಮಾರ್ಗದರ್ಶನ, ಪರೀಕ್ಷಾ ತರಬೇತಿ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕಾಲೇಜು ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲ ಪ್ರಕಾಶ ಕೆದ್ಲಾಯಿ, ಗಣಿತ ಉಪನ್ಯಾಸಕರಾದ ಶ್ರೀನಿವಾಸ ನಾಯ್ಕ, ಗಣಪತಿ ನಾಯ್ಕ ಸೇರಿದಂತೆ ಬೋಧಕ ಸಿಬ್ಬಂದಿ ಉಪಸ್ಥಿತರಿದ್ದರು.

About The Author


More Stories
AITM ಭಟ್ಕಳದಲ್ಲಿ IPR ಮತ್ತು ಪೇಟೆಂಟ್ಗಳ ಕುರಿತು ರಾಷ್ಟ್ರೀಯ ಮಟ್ಟದ ಆನ್ಲೈನ್ ಕಾರ್ಯಾಗಾರ
ಸತತ 5ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗೆದ್ದ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜು
ಯಶಸ್ವಿಯಾಗಿ ನಡೆದ ಶಿರಾಲಿ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ: ಜನತಾ ವಿದ್ಯಾಲಯ ಸಮಗ್ರ ವೀರಾಗ್ರಣಿ