ಭಟ್ಕಳ: ಪ್ರೋ ಕಬಡ್ಡಿ ಮಾದರಿಯಲ್ಲಿ ಭಟ್ಕಳ ತಾಲೂಕಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಕಬಡ್ಡಿ ಫೆಡರೇಶನ್ ಕಪ್ ಪಂದ್ಯಾಟವನ್ನು ಮೇ ೯ ಮತ್ತು ೧೦ ರಂದು ಭಟ್ಕಳದ ತಾಲೂಕಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದೆ ಎಂದು ಉತ್ತರ ಕನ್ನಡ ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಶ್ರೀಧರ ನಾಯ್ಕ ತಿಳಿಸಿದ್ದಾರೆ.
ಬುಧವಾರ ಖಾಸಗಿ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂದ್ಯಾಟದಲ್ಲಿ ಪ್ರಥಮ ಬಹುಮಾನವಾಗಿ ರೂ. ೭೫,೦೦೦, ದ್ವಿತೀಯ ಬಹುಮಾನ ರೂ. ೫೦,೦೦೦ ಹಾಗೂ ತೃತೀಯ ಬಹುಮಾನ ರೂ. ೨೫,೦೦೦ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಒಟ್ಟು ೮ ತಂಡಗಳ ಮಾಲಕರು ಭಾಗವಹಿಸಲಿದ್ದು, ಆಟಗಾರರು ಏಪ್ರಿಲ್ ೨೭ರೊಳಗೆ ಗೂಗಲ್ ಫಾರ್ಮ್ ಮೂಲಕ ನೋಂದಣಿ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಪಂದ್ಯಾವಳಿಗೆ ಸುಮಾರು ೫,೦೦೦ ಪ್ರೇಕ್ಷಕರು ಕುಳಿತು ವೀಕ್ಷಿಸಲು ವ್ಯವಸ್ಥೆ ಕಲ್ಪಿಸಲಾಗಿದ್ದು, ಕ್ರೀಡಾಭಿಮಾನಿಗಳಿಗೆ ರೋಚಕ ಹಾಗೂ ಸ್ಪರ್ಧಾತ್ಮಕ ಪಂದ್ಯಗಳ ನಿರೀಕ್ಷೆ ಇದೆ. ಭಟ್ಕಳದಲ್ಲಿ ಕಬಡ್ಡಿಗೆ ವಿಶೇಷ ಮಹತ್ವವಿದ್ದು, ಕಳೆದ ಕೆಲವು ವರ್ಷಗಳಿಂದ ಪಂದ್ಯಾವಳಿ ನಡೆಯದೆ ಕಬಡ್ಡಿ ಪ್ರಿಯರು ನಿರಾಸೆಗೊಂಡಿದ್ದರು. ಈ ಬಾರಿ ಫೆಡರೇಶನ್ ಕಪ್ ಪ್ರೋ ಕಬಡ್ಡಿ ಮಾದರಿಯಲ್ಲಿ ನಡೆಯಲಿದ್ದು, ಜಿಲ್ಲೆಯ ವಿವಿಧ ಭಾಗಗಳಿಂದ ಶ್ರೇಷ್ಠ ಆಟಗಾರರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕಾ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ರವೂಫ್ ನಾಯ್ತೆ, ಜಿಲ್ಲಾ ಉಪಾಧ್ಯಕ್ಷ ಜಾಫರ್ ಹೈದರ್, ತಾಲೂಕಾ ಉಪಾಧ್ಯಕ್ಷ ಪ್ರಕಾಶ ನಾಯ್ಕ, ಕನ್ವೀನರ್ ಅಜುಜುರ್ ರಹಮಾನ, ಇನಾಯತ್ ಉಲ್ಲಾ, ಸಮೀರ್ ಮೊಮಿನ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಪಂದ್ಯಾಟದ ಯಶಸ್ಸಿಗೆ ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರೋತ್ಸಾಹಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.
About The Author


More Stories
AITM ಭಟ್ಕಳದಲ್ಲಿ IPR ಮತ್ತು ಪೇಟೆಂಟ್ಗಳ ಕುರಿತು ರಾಷ್ಟ್ರೀಯ ಮಟ್ಟದ ಆನ್ಲೈನ್ ಕಾರ್ಯಾಗಾರ
ಸತತ 5ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗೆದ್ದ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜು
ಯಶಸ್ವಿಯಾಗಿ ನಡೆದ ಶಿರಾಲಿ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ: ಜನತಾ ವಿದ್ಯಾಲಯ ಸಮಗ್ರ ವೀರಾಗ್ರಣಿ