ಭಟ್ಕಳ: ದ್ವಿತೀಯ ಪಿಯುಸಿ ಮರುಮೌಲ್ಯಮಾಪನ ಫಲಿತಾಂಶದಲ್ಲಿ ತಾಲೂಕಿನ ವಿದ್ಯಾರ್ಥಿಯೊಬ್ಬರು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿ ಭಟ್ಕಳಕ್ಕೆ ಕೀರ್ತಿ ತಂದಿದ್ದಾರೆ.

ತಾಲೂಕಿನ ಶ್ರೀ ಗುರು ವಿದ್ಯಾಧಿರಾಜ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ತೇಜಸ್ ರವಿ ನಾಯ್ಕ 99 ಶೇಕಡಾ ಅಂಕಗಳನ್ನು ಪಡೆದು ರಾಜ್ಯಕ್ಕೆ 6ನೇ ಸ್ಥಾನ ಪಡೆದಿದ್ದಾರೆ. ಜೊತೆಗೆ ಉತ್ತರ ಕನ್ನಡ ಜಿಲ್ಲೆಗೆ 2ನೇ ಸ್ಥಾನ ಹಾಗೂ ಭಟ್ಕಳ ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ತೇಜಸ್ ಅವರು ಕರಾವಳಿ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸುತ್ತಿರುವ ರವಿ ನಾಯ್ಕ ಅವರ ಪುತ್ರರಾಗಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

More Stories
ಶಬರಿಮಲೈನಲ್ಲಿ ಮುರಿನಕಟ್ಟೆ ವಿವಾದ ಶೀಘ್ರ ಪರಿಹಾರಕ್ಕೆ ಅಯ್ಯಪ್ಪ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ
ಕಪ್ಪೆಚಿಪ್ಪಿನ ದುರಂತ ಸಂತ್ರಸ್ತ ಕುಟುಂಬಗಳಿಗೆ ಆರ್ಯ ಈಡಿಗ ನಾಮಧಾರಿ ಬಿಲ್ಲವ ನೌಕರಿ ವೃಂದದಿಂದ ಆರ್ಥಿಕ ನೆರವು
ಗಾಂಜಾ ಸೇವನೆ ದೃಢ; ಮೂವರು ಯುವಕರ ವಿರುದ್ಧ ಪೊಲೀಸ್ ಪ್ರಕರಣ ದಾಖಲು