ಹೊನ್ನಾವರ: ತಾಲೂಕಿನ ಮಾಂಕಿಯ ಗೋಲ್ ಇಂಟರ್‌ನ್ಯಾಷನಲ್ ಪಬ್ಲಿಕ್ ಶಾಲೆ ಐಸಿಎಸ್ಇ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧಿಸಿದೆ.

ತನ್ಮಯ ಗಣಪತಿ ನಾಯ್ಕ 94.2% ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಗೌತಮದೇವ ನಾಗರಕಟ್ಟೆ 89.6% ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದು, ಲಹರಿ ಎಚ್. 89.2% ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ. ಒಟ್ಟು 39 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 17 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 13 ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್ ಮತ್ತು 9 ವಿದ್ಯಾರ್ಥಿಗಳು ಸೆಕೆಂಡ್ ಕ್ಲಾಸ್‌ನಲ್ಲಿ ಉತ್ತೀರ್ಣರಾಗಿದ್ದಾರೆ.



ಶಾಲೆಯ ಅಧ್ಯಕ್ಷರಾದ ಎ.ಆರ್. ನಾಯಕ ಪೋಷಕರು ಹಾಗೂ ಶಿಕ್ಷಕ ಸಿಬ್ಬಂದಿಗಳು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದಿಸಿ, ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

More Stories
ವಿಜೃಂಭಣೆಯಿಂದ ಸಂಪನ್ನ ಗೊಂಡ ಮಂಕಾಳಮ್ಮ ದೇವಿಯ ಬಂಡಿ ಹಬ್ಬ
ಸಾಂಸ್ಕೃತಿಕ ಸಂಭ್ರಮದಲ್ಲಿ ಸಾಧಕರಿಗೆ ಸನ್ಮಾನ
ಗೋಲ್ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್ ಪ್ರತಿಷ್ಠಿತ ರಾಷ್ಟ್ರೀಯ ಶಾಲಾ ಪ್ರಶಸ್ತಿಯನ್ನು ಗಳಿಸಿದೆ.