

ಭಟ್ಕಳ: ತಾಲೂಕಿನ ಶಿರಾಲಿ ಸಮೀಪದ ಕೋಟೆಬಾಗಿಲಿನ ಸೇಂಟ್ ಥಾಮಸ್ ಇಂಗ್ಲಿಷ್ ಮೀಡಿಯಂ ಶಾಲೆ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಶೇ.100 ಫಲಿತಾಂಶ ದಾಖಲಿಸಿ ಗಮನಾರ್ಹ ಸಾಧನೆ ಮಾಡಿದೆ.


ಪರೀಕ್ಷೆಗೆ ಹಾಜರಾದ ಎಲ್ಲಾ 58 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಇವರಲ್ಲಿ 36 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 17 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಶ್ರೀಶಾ ಶ್ರೀಧರ ಶೇಟ್ (612 ಅಂಕ, ಶೇ.98) ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದು, ಅಶ್ವಿತಾ ಜಯಂತ್ ಮೊಗೇರ್ (597 ಅಂಕ, ಶೇ.96) ದ್ವಿತೀಯ ಹಾಗೂ ಪದ್ಮಪ್ರಸಾದ್ ಪಾರ್ಶ್ವನಾಥ ಜೈನ್ (591 ಅಂಕ, ಶೇ.95) ತೃತೀಯ ಸ್ಥಾನ ಗಳಿಸಿದ್ದಾರೆ. ಗುಣಮಟ್ಟದ ದೃಷ್ಟಿಯಿಂದಲೂ ಶಾಲೆ ‘ಎ’ ಗ್ರೇಡ್ ಪಡೆದಿದೆ.
ಶಿರಾಲಿಯ ಗ್ರಾಮೀಣ ಪ್ರದೇಶದಲ್ಲಿ ಕಳೆದ 23 ವರ್ಷಗಳಿಂದ ಶಾಲೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಅನುದಾನರಹಿತ ಸಂಸ್ಥೆಯಾಗಿದ್ದರೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಉಚಿತ ರಾತ್ರಿ ಶಾಲೆ ಹಾಗೂ ವಿಶೇಷ ತರಗತಿಗಳನ್ನು ನಡೆಸಿ ಉತ್ತಮ ಫಲಿತಾಂಶ ದಾಖಲಿಸುತ್ತಾ ಬಂದಿದೆ.




ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯ ಸ್ಯಾಮ್ಯುಯೆಲ್ ವರ್ಗಿಸ್, ಶಿಕ್ಷಕ ವೃಂದ, ಪೋಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸಂತಸ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಪೋಷಕರ ಸಹಕಾರವೇ ಈ ಯಶಸ್ಸಿನ ಹಿಂದಿನ ಪ್ರಮುಖ ಕಾರಣ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.


About The Author




More Stories
ತೆರೆದ ಚರಂಡಿ ಹೊಂಡ: ಅಪಾಯದ ನಡುವೆ ಭಟ್ಕಳದ ವಾಹನ ಸವಾರರ ಸಂಚಾರ.
ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಮಂಕಾಳ್ ಎಸ್. ವೈದ್ಯ ಆಯ್ಕೆ: ಮಾಜಿ ಸಚಿವರಿಗೆ ಭಟ್ಕಳದಲ್ಲಿ ಅದ್ಧೂರಿ ಸ್ವಾಗತ.
ಆಗಸ್ಟ್ 18ರಂದು ಭಟ್ಕಳದಲ್ಲಿ ಬೃಹತ್ ರಕ್ತದಾನ ಶಿಬಿರ: ಡಾ. ಸುರೇಶ ನಾಯಕ್ ಸ್ಮರಣಾರ್ಥ ಆಯೋಜನೆ