May 13, 2026

ಮೇ 9ರಂದು ಚಿತ್ರದುರ್ಗದಲ್ಲಿ “ಬಿ.ಎಸ್.ವೈ ಅಭಿಮಾನೋತ್ಸವ”


ಹೊನ್ನಾವರ: ಮಾಜಿ ಮುಖ್ಯಮಂತ್ರಿ B. S. Yediyurappa ಅವರ 50 ವರ್ಷದ ಸಮಾಜಸೇವೆಯನ್ನು ಯುವಕರಿಗೆ ಪ್ರೇರಣೆಯಾಗಿಸಲು ಮೇ 9ರಂದು Chitradurga ನಲ್ಲಿ “ಬಿ.ಎಸ್.ವೈ ಅಭಿಮಾನೋತ್ಸವ”ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ತಿಳಿಸಿದ್ದಾರೆ.


ಮಂಗಳವಾರ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮವು ಸಂಸದ Govind Karjol ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಕೇಂದ್ರ ಗೃಹ ಸಚಿವ Amit Shah ಸೇರಿದಂತೆ ವಿವಿಧ ಮಠಗಳ ಮಠಾಧೀಶರು ಹಾಗೂ ರಾಜ್ಯದ ಸಂಸದರು ಭಾಗವಹಿಸಲಿದ್ದಾರೆ.


ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಥಮ ಬಾರಿಗೆ ರಾಜ್ಯದಲ್ಲಿ ಕೃಷಿ ಬಜೆಟ್ ಮಂಡಿಸಿದ್ದು, ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಜನಮನ್ನಣೆ ಪಡೆದಿದ್ದರು. ಸಂಧ್ಯಾ ಸುರಕ್ಷಾ, ಭಾಗ್ಯಲಕ್ಷ್ಮಿ, ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.


ಅವರ 50 ವರ್ಷದ ಸಮಾಜಮುಖಿ ಸೇವೆಯನ್ನು ಸ್ಮರಿಸುವ ಈ ಅಭಿಮಾನೋತ್ಸವಕ್ಕೆ ಜಿಲ್ಲೆಯಿಂದ ನಾಲ್ಕು ಸಾವಿರಕ್ಕೂ ಅಧಿಕ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವು ಪಕ್ಷದ ಕಾರ್ಯಕರ್ತರಿಗೆ ಪ್ರೇರಣೆಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.


ಇದೇ ವೇಳೆ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿರುವುದನ್ನು ಅವರು ಉಲ್ಲೇಖಿಸಿದರು. ಆಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಜೊತೆಗೆ West Bengal ನಲ್ಲಿ ಸಾಧಿಸಿದ ಗೆಲುವು ದೇಶದ ಅಭಿವೃದ್ಧಿಯತ್ತದ ಹೆಜ್ಜೆಯನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಶಿವಾನಂದ ನಾಯ್ಕ, ಮಂಡಲಾಧ್ಯಕ್ಷ ಮಂಜುನಾಥ ನಾಯ್ಕ, ಯೋಗೀಶ ಮೇಸ್ತ, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ರಾಜೇಂದ್ರ ನಾಯ್ಕ, ಜಿಲ್ಲಾ ಉಪಾಧ್ಯಕ್ಷ ಜಿ.ಎಸ್. ಗುಣಗಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ

About The Author

error: Content is protected !!