ಭಟ್ಕಳ: ಕರಾವಳಿ ನಗರ ಭಟ್ಕಳದಲ್ಲಿ ಬುಧವಾರ ಸಂಜೆ ನಡೆದ ದುರ್ಘಟನೆಯಲ್ಲಿ ಅರಬ್ಬಿ ಸಮುದ್ರದಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಈ ಘಟನೆ ಪ್ರವಾಸಿ ತಾಣವಾದ ಮುಂಡಳಿ ನಸ್ತಾರ್ ಬೀಚ್ ನಲ್ಲಿ ನಡೆದಿದೆ.

ಮೃತರನ್ನು ಉತ್ತರ ಪ್ರದೇಶ ಮೂಲದ ಮಹಮ್ಮದ್ ಅಫ್ರೋಜ್ ತಂದೆ ನೂರ್ ಮೊಹಮ್ಮದ್ 34 ವರ್ಷ ಹಾಗೂ ರಿಜ್ವಾನ್ ಮಹ್ಮದ ಸಾಕಿರ್ 27 ವರ್ಷ ಮೃತಪಟ್ಟಿದ್ದಾರೆ.
ಈ ಇಬ್ಬರು ಸ್ಥಳೀಯ ಗಾರ್ಮೆಂಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಾಡುತ್ತಿದ್ದರು ಎನ್ನಲಾಗಿದೆ.
ಏಳು ಜನರ ತಂಡದ ಸಮುದ್ರ ತೆರಳಿದರು ಎನ್ನಲಾಗಿದೆ. ಮೂಲಗಳ ಪ್ರಕಾರ, ಈ ತಂಡ ಸಂಜೆ ಸುಮಾರು 4 ಗಂಟೆಗೆ ಸುಮಾರಿಗೆ ವಾಯು ವಿಹಾರಕ್ಕಾಗಿ ಬೀಚ್‌ಗೆ ತೆರಳಿತ್ತು.
ಅವರಲ್ಲಿ ಮೂವರು ಸಮುದ್ರ ತೀರದಲ್ಲಿ ಕುಳಿತುಕೊಂಡಿದ್ದರೆ, ಇನ್ನೂ ನಾಲ್ವರು ಸಮೀಪದ ಬಂಡೆ ಪ್ರದೇಶಕ್ಕೆ ಏರಿ ಸಮುದ್ರದ ಸೌಂದರ್ಯ ವೀಕ್ಷಿಸುತ್ತಿದ್ದರು. ಇದೇ ವೇಳೆ ಏಕಾಏಕಿ ಅಬ್ಬರದ ಅಲೆ ಬಂದು ಬಂಡೆಯ ಮೇಲೆ ನಿಂತಿದ್ದ ಇಬ್ಬರನ್ನು ಸಮುದ್ರಕ್ಕೆ ಎಳೆದುಕೊಂಡು ಹೋಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ನೂರಾರು ಜನರು ಜಮಾಯಿಸಿದರು. ಸಾಮಾಜಿಕ ಕಾರ್ಯಕರ್ತ ಸೌದ್ ಗೌವಾಯಿ ಅವರು ಸಿಯಾನ್ ಹಾಗೂ ಸಾಜಪ್ ಸೇರಿ ಮೂವರೊಂದಿಗೆ ಪ್ರಾಣಾಪಾಯ ಲೆಕ್ಕಿಸದೆ ಸಮುದ್ರಕ್ಕಿಳಿದು ರಕ್ಷಣಾ ಕಾರ್ಯಕ್ಕೆ ಮುಂದಾದರೂ, ಅಷ್ಟರಲ್ಲೇ ಇಬ್ಬರೂ ಮೃತಪಟ್ಟಿದ್ದರು.
ನಂತರ ರಕ್ಷಣಾ ತಂಡ ಇಬ್ಬರ ಮೃತದೇಹಗಳನ್ನು ಸಮುದ್ರದಿಂದ ಹೊರತೆಗೆದಿತು. ಮಾಹಿತಿ ಪಡೆದ ಭಟ್ಕಳ ಡಿವೈಎಸ್ಪಿ ಗಿರೀಶ್, ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೆಂಕಟೇಶ್ ಹಾಗೂ ಕರಾವಳಿ ಭದ್ರತಾ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಂಡರು.
ಮೃತದೇಹಗಳನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.

More Stories
ಭಟ್ಕಳದಲ್ಲಿ ಮನೆ ಕಳ್ಳತನ: 5.5 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿಕೆ
ಮುರ್ಡೇಶ್ವರದಲ್ಲಿ ಭೀಕರ ರಸ್ತೆ ಅಪಘಾತ: ಮಾಜಿ ಸೈನಿಕ ಸಾವು, ಮೂವರಿಗೆ ಗಾಯ
ಭಟ್ಕಳ ಸೋಡಿಗದ್ದೆ ಶ್ರೀ ಮಹಾಸತಿ ದೇವಸ್ಥಾನದ ನೂತನ ಶಿಲಾಮಯ ಕಟ್ಟಡಕ್ಕೆ ಮೇ 14ರಂದು ಶಿಲಾನ್ಯಾಸ