ಭಟ್ಕಳ: ಸ್ಪಂದನ (ರಿ) ಭಟ್ಕಳ, ರಂಜನ್ ಇಂಡೇನ್ ಭಟ್ಕಳ ಹಾಗೂ ಬೆನಕ ಇವೆಂಟ್ಸ್ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ಹಲಸು ಮೇಳ ಕಾರ್ಯಕ್ರಮಕ್ಕೆ ಇಲ್ಲಿನ ಮಣ್ಕುಳಿ ಶ್ರೀ ರಾಘವೇಂದ್ರ ಮಠದ ಸಭಾಭವನದಲ್ಲಿ ವಿಜಯ ಬ್ಯಾಂಕ್‌ನ ನಿವೃತ್ತ ಮುಖ್ಯ ವ್ಯವಸ್ಥಾಪಕ ಎಂ.ಆರ್. ನಾಯ್ಕ ಚಾಲನೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ಮೇಳದಿಂದ ಸ್ಥಳೀಯ ಹಾಗೂ ದೂರದ ವ್ಯಾಪಾರಿಗಳು ಮತ್ತು ರೈತರಿಗೆ ಉತ್ತಮ ಅವಕಾಶ ದೊರೆಯಲಿದೆ. ಮೇಳದಲ್ಲಿನ ಬಹುತೇಕ ಉತ್ಪನ್ನಗಳು ಸ್ವದೇಶಿಯಾಗಿದ್ದು, ಆಹಾರ ಪದಾರ್ಥಗಳ ಜೊತೆಗೆ ಆರೋಗ್ಯ ವೃದ್ಧಿ ಹಾಗೂ ರಕ್ಷಣೆಗೆ ಸಂಬAಧಿಸಿದ ಪೂರಕ ಉಪಕರಣಗಳ ಮಳಿಗೆಗಳೂ ಇದ್ದವೆ. ದಾವಣಗೆರೆಯಂತಹ ದೂರದ ಪ್ರದೇಶಗಳಿಂದಲೂ ವ್ಯಾಪಾರಿಗಳು ಆಗಮಿಸಿರುವುದು ವಿಶೇಷ ಎಂದರು.

ರAಜನ್ ಇಂಡೇನ್ ಮಾಲಕಿ ಶಿವಾನಿ ಶಾಂತಾರಾಮ ಮಾತನಾಡಿ, ಕಳೆದ ಬಾರಿ ಮೂರು ದಿನಗಳ ಕಾಲ ಮೇಳ ಆಯೋಜಿಸಲಾಗಿದ್ದು ಗ್ರಾಹಕರಿಗೆ ಸ್ವಲ್ಪ ಗೊಂದಲ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ನಾಲ್ಕು ದಿನಗಳ ಕಾಲ ಮೇಳ ನಡೆಸಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಅಗತ್ಯ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗಂಗಾಧರ ನಾಯ್ಕ ಹಲಸಿನ ಹಣ್ಣಿನ ವಿಶೇಷತೆ ಹಾಗೂ ನಿತ್ಯ ಜೀವನದಲ್ಲಿ ಹಲಸಿನ ಮರದ ಮಹತ್ವದ ಕುರಿತು ವಿವರಿಸಿದರು. ಸ್ಪಂದನ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಘವೇಂದ್ರ ನಾಯ್ಕ ಮಾತನಾಡಿ, ಕಳೆದ ವರ್ಷ ಆರಂಭವಾದ ಹಲಸು ಮೇಳಕ್ಕೆ ಭಟ್ಕಳದ ಜನರು ಉತ್ತಮ ಸ್ಪಂದನೆ ನೀಡಿದ್ದರು. ಈ ಬಾರಿ ಪುದುಚೇರಿಯಿಂದಲೂ ವ್ಯಾಪಾರಿಗಳು ಭಾಗವಹಿಸಿರುವುದು ಮೇಳದ ವಿಶೇಷತೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸ್ಥಳೀಯ ವ್ಯಾಪಾರಿಗಳು ಭಾಗವಹಿಸುವಂತಾಗಬೇಕು ಎಂದು ಆಶಿಸಿದರು.
ಪತ್ರಕರ್ತ ಈಶ್ವರ ನಾಯ್ಕ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಬೆನಕ ಇವೆಂಟ್ಸ್ ವ್ಯವಸ್ಥಾಪಕ ಭಾಸ್ಕರ ಪೂಜಾರಿ ಹಾಗೂ ಮೇಳದ ರೂವಾರಿ ಗಣೇಶ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಖಾದಿ ಉತ್ಪನ್ನಗಳು, ಚೆನ್ನಪಟ್ಟಣ ಆಟಿಕೆಗಳು, ಗೃಹೋಪಯೋಗಿ ವಸ್ತುಗಳು, ವಿವಿಧ ತಳಿಯ ಹಲಸುಗಳು, ಆಯುರ್ವೇದ ಗಿಡಮೂಲಿಕೆಗಳು, ತಂಪು ಪಾನೀಯಗಳು, ಕೃಷಿ ಹೂವಿನ ಹಾಗೂ ಹಣ್ಣಿನ ಗಿಡಗಳು, ವಿದ್ವಾಂಸರ ಭಾವಚಿತ್ರಗಳು ಹಾಗೂ ಹಲಸಿನ ವಿವಿಧ ಖಾದ್ಯಗಳು ಮೇಳದ ಪ್ರಮುಖ ಆಕರ್ಷಣೆಯಾಗಿದ್ದವು.

More Stories
ಬಕ್ರೀದ್ ಹಿನ್ನೆಲೆ ಭಟ್ಕಳದಲ್ಲಿ ಕಟ್ಟೆಚ್ಚರ: ಮೇ 30ರವರೆಗೆ ಅಧಿಕಾರಿಗಳಿಗೆ ಕೇಂದ್ರ ಸ್ಥಾನದಲ್ಲೇ ಇರಲು ಸೂಚನೆ
ಮನೆ ಕಳ್ಳತನ ಪ್ರಕರಣ: 8 ಗಂಟೆಯೊಳಗೆ ಆರೋಪಿಗಳ ಬಂಧನ
ಎಲ್ಲರ ಮೆಚ್ಚುಗೆಗೆ ಪಾತ್ರವಾದ ಬಿಬಿಎ ವಿಭಾಗದ ಬಿಜ್ ಲೀಡ್ ಎಕ್ಸ್ 2025-26 ಗ್ರ್ಯಾಂಡ್ ಫಿನಾಲೆ