May 24, 2026

ಮನೆ ಮನೆಗೆ ನಮ್ಮ ಶಾಸಕರು, ಮನೆ ಬಾಗಿಲಿಗೆ ಸರ್ಕಾರ ಕಾರ್ಯಕ್ರಮ ಯಶಸ್ವಿ

ಹಿರೇಕುಂಬಳಗುAಟೆಯಲ್ಲಿ ಜನಸ್ಪಂದನೆಗೆ ಸಾಕ್ಷಿಯಾದ ಜನಪರ ಕಾರ್ಯಕ್ರಮ

ವಿಜಯನಗರ: ಜಿಲ್ಲೆ ಕೂಡ್ಲಿಗಿ ತಾಲೂಕಿನ ಹಿರೇಕುಂಬಳಗುAಟೆ ಗ್ರಾಮದಲ್ಲಿ ಮೇ 18ರಂದು ಶಾಸಕರಾದ ಡಾ. ಎನ್.ಟಿ. ಶ್ರೀನಿವಾಸ್ ಅವರ ವಿನೂತನ ಕಾರ್ಯಕ್ರಮ ಮನೆ ಮನೆಗೆ ನಮ್ಮ ಶಾಸಕರು, ಮನೆ ಬಾಗಿಲಿಗೆ ಸರ್ಕಾರ, ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ಜರುಗಿತು.

ಹಿರೇಕುಂಬಳಗುAಟೆ ಗ್ರಾಮ ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹತ್ತು ಗ್ರಾಮಗಳ ನೂರಾರು ಗ್ರಾಮಸ್ಥರು ಹಾಗೂ ನೆರೆಹೊರೆಯ ಗ್ರಾಮ ಪಂಚಾಯಿತಿಗಳ ಹಲವು ಗ್ರಾಮಗಳ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಪಡೆದು ಸದುಪಯೋಗ ಮಾಡಿಕೊಂಡರು.

ಕಾರ್ಯಕ್ರಮದಲ್ಲಿ ಮಹಿಳೆಯರು, ವೃದ್ಧರು, ಹಿರಿಯ ನಾಗರಿಕರು ಸೇರಿದಂತೆ ನೂರಾರು ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಶಾಸಕರಿಗೆ ಸಲ್ಲಿಸಿದರು. ಕೆಲ ತುರ್ತು ಸಮಸ್ಯೆಗಳ ಕುರಿತು ಶಾಸಕರು ಸ್ಥಳದಲ್ಲಿಯೇ ಸ್ಪಂದಿಸಿ ಪರಿಹಾರ ಕಲ್ಪಿಸುವ ಪ್ರಯತ್ನ ನಡೆಸಿದರು. ನೂರಾರು ಅರ್ಜಿಗಳನ್ನು ಸ್ವೀಕರಿಸಿದ ಶಾಸಕರು, ಸ್ಥಳದಲ್ಲಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ವಿ.ಕೆ. ನೇತ್ರಾವತಿ ಅವರು ಪೋತಿ ಆಂದೋಲನ ಕುರಿತು ಮಾಹಿತಿ ನೀಡಿದರು. ಜೊತೆಗೆ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿ, ಸಾರ್ವಜನಿಕರು ಅವುಗಳ ಸದುಪಯೋಗ ಪಡೆಯುವಂತೆ ಮನವಿ ಮಾಡಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಟಿ. ನರಸಪ್ಪ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಆಡಳಿತಾಧಿಕಾರಿಗಳು, ಹಿರೇಕುಂಬಳಗುAಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

About The Author

error: Content is protected !!