ಭಟ್ಕಳ: ಬಕ್ರೀದ್ ಹಬ್ಬದ ಹಿನ್ನೆಲೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿ 11 ಜಾನುವಾರುಗಳನ್ನು ರಕ್ಷಿಸಿದ ಘಟನೆ ತಾಲೂಕಿನ ಜಾಲಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.


ಸುಮಾರು 1.40 ಲಕ್ಷ ಮೌಲ್ಯದ 14 ಜಾನುವಾರುಗಳನ್ನು ಇಚರ್ ಕಂಪನಿಯ ಇನ್ಸುಲೇಟರ್ ವಾಹನದಲ್ಲಿ ಹಿಂಸಾತ್ಮಕವಾಗಿ ಹಗ್ಗಗಳಿಂದ ಕಟ್ಟಿ, ನೀರು-ಮೇವು ನೀಡದೆ ಒಂದರ ಮೇಲೊಂದು ತುಂಬಿಕೊAಡು ಯಾವುದೇ ದಾಖಲೆಗಳಿಲ್ಲದೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಗುರುವಾರ ಬೆಳಗಿನ ಜಾವ 4.50ರ ಸುಮಾರಿಗೆ ಜಾಲಿ ಕ್ರಾಸ್ ಬಳಿ ಪೊಲೀಸರು ವಾಹನ ತಡೆದು ನಿಲ್ಲಿಸಲು ಸೂಚಿಸಿದರೂ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಬಳಿಕ ಡೊಂಗರಪಳ್ಳಿ ಸಮೀಪದ ಖುಲ್ಲಾ ಜಾಗದಲ್ಲಿ ವಾಹನ ಬಿಟ್ಟು ಆರೋಪಿತರು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ವಾಹನದಲ್ಲಿದ್ದ ಜಾನುವಾರುಗಳಲ್ಲಿ ಒಂದು ಕೋಣ, ಒಂದು ಎಮ್ಮೆ ಹಾಗೂ ಒಂದು ಎತ್ತು ಉಸಿರುಗಟ್ಟಿ ಮೃತಪಟ್ಟಿದ್ದು, ಉಳಿದ 11 ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದಾರೆ.

ನಗರ ಠಾಣೆ ಪಿಎಸೈ ತಿಮ್ಮಪ್ಪ ಎಸ್. ದೂರು ನೀಡಿದ್ದು, ಪಿಎಸೈ ನವೀನ್ ನಾಯ್ಕ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ