ಭಟ್ಕಳ: ತಾಲೂಕಿನ ಪುರವರ್ಗದ ಗಣೇಶನಗರದಲ್ಲಿ ಮನೆ ಖಾಲಿ ಇರುವುದನ್ನು ಗಮನಿಸಿದ ಕಳ್ಳರು ಬೀಗ ಒಡೆದು ಒಳನುಗ್ಗಿ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಮನೆಯ ಯಜಮಾನಿ ಬಿಬಿ ಇನಶಿಯಾ ಮಹ್ಹದ್ ರೆಹಾನ್ ಸಾಬ್ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮೇ 18ರ ಸಂಜೆದಿAದ ಮೇ 20ರ ಮುಂಜಾನೆ ನಡುವಿನ ಅವಧಿಯಲ್ಲಿ ಕಳ್ಳತನ ನಡೆದಿರುವ ಶಂಕೆ ವ್ಯಕ್ತವಾಗಿದೆ.


ಕಳ್ಳರು ಮನೆಯ ಅಲಮಾರಿಯನ್ನು ತಪಾಸಣೆ ನಡೆಸಿ ಸುಮಾರು ರೂ, 3 ಲಕ್ಷ ಮೌಲ್ಯದ ಬಂಗಾರದ ಆಭರಣಗಳು ಹಾಗೂ ರೂ,37 ಸಾವಿರ ನಗದು ಕಳವು ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಗ್ರಾಮೀಣ ಪೊಲೀಸರು, ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ