May 23, 2026

ಭಟ್ಕಳ:ದನ ಸಾಗಾಟ ಪ್ರಕರಣ: ಪ್ರಮುಖ ಆರೋಪಿ ಬಂಧನ

ಭಟ್ಕಳ: ತಾಲೂಕಿನ ಹಾಡುವಳ್ಳಿ ಗ್ರಾಮದ ಹಲ್ಯಾಣಿ ಸಮೀಪ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಮುಖ ಆರೋಪಿಯನ್ನು ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಗ್ದಮ್ ಕಾಲೋನಿಯ ನಿವಾಸಿ ಮೊಹಮ್ಮದ್ ದಾನಿಶ್ (30) ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಾಗಿದ ಎರಡು ದಿನಗಳಲ್ಲೇ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ..

ಮೇ 17ರಂದು ಬೆಳಗಿನ ಜಾವ 4.15ರ ಸುಮಾರಿಗೆ ಹಲ್ಯಾಣಿ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಪೆಟ್ರೋಲಿಂಗ್ ನಡೆಸುತ್ತಿದ್ದ ವೇಳೆ ಮಾರುತಿ ಸುಜುಕಿ ಬಲೆನೋ ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವುದು ಕಂಡುಬAದಿತ್ತು. ಅರಣ್ಯ ಇಲಾಖೆ ವಾಹನವನ್ನು ಗಮನಿಸಿದ ಆರೋಪಿತರು ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದರು.

ಪ್ರಕರಣದಲ್ಲಿ ಒಟ್ಟು ನಾಲ್ವರು ಭಾಗಿಯಾಗಿರುವುದು ತಿಳಿದುಬಂದಿದ್ದು, ಅವರ ಪೈಕಿ ಇದೀಗ ಒಬ್ಬನನ್ನು ಬಂಧಿಸಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಭರಮಪ್ಪ ಬೆಳಗಲಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮದರಸಾಬ್ ಚಿಕ್ಕೇರಿ, ಈರಣ್ಣ ಬಾಗಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು. ಉಳಿದ ಮೂವರು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ತನಿಖೆ ಮುಂದುವರಿದಿದೆ.

About The Author

error: Content is protected !!