May 23, 2026

ಮನೆ ಕಳ್ಳತನ ಪ್ರಕರಣ: 8 ಗಂಟೆಯೊಳಗೆ ಆರೋಪಿಗಳ ಬಂಧನ

ಭಟ್ಕಳ: ಮನೆ ಕಳ್ಳತನ ಪ್ರಕರಣ ದಾಖಲಾದ ಕೇವಲ 8 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಭಟ್ಕಳ ಶಹರ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮಹಮದ್ ರಾಹಿಲ್ (39) ಹಾಗೂ ನೌಶಾದ್ ಮುಕ್ತಾರ್ ಅಹಮದ್ ಹಂಚಿ (28) ಎಂದು ಗುರುತಿಸಲಾಗಿದೆ. ಇಬ್ಬರೂ ಪುರವರ್ಗದ ಗಣೇಶನಗರ ನಿವಾಸಿಗಳಾಗಿದ್ದು, ಚಾಲಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಮೇ 20ರಂದು ಬಿಬಿ ಇನ್ಸಿಯಾ ಮಹಮ್ಮದ್ ರೆಹಾನ್ ಸಾಬ್ ಅವರು ಭಟ್ಕಳ ಶಹರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪುರವರ್ಗದಲ್ಲಿರುವ ತಮ್ಮ ಮನೆಯೊಳಗೆ ನುಗ್ಗಿದ ಕಳ್ಳರು ಬೆಡ್‌ರೂಮ್ ಬೀಗ ಒಡೆದು ಕಪಾಟಿನಲ್ಲಿದ್ದ ಬಂಗಾರದ ಆಭರಣ ಹಾಗೂ ನಗದು ಹಣ ಕಳವು ಮಾಡಿಕೊಂಡು ಹೋಗಿರುವುದಾಗಿ ತಿಳಿಸಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ, ತನಿಖೆ ವೇಳೆ ಆರೋಪಿಗಳನ್ನು ಪುರವರ್ಗ ಸಮೀಪ ಪತ್ತೆಹಚ್ಚಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ನಡೆಸಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿತರಿಂದ ಸುಮಾರು ರೂ 2.21 ಲಕ್ಷ ಮೌಲ್ಯದ ಬಂಗಾರದ ಆಭರಣಗಳು ಹಾಗೂ ರೂ 22,950 ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್.ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ. ಕೃಷ್ಣಮೂರ್ತಿ ಹಾಗೂ ಜಗದೀಶ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಬಿ. ಗಿರೀಶ್ ನೇತೃತ್ವದಲ್ಲಿ ಸಿಪಿಐ ದಿವಾಕರ ಪಿ.ಎಂ., ಪಿಎಸ್‌ಐ ನವೀನ್ ಎಸ್. ನಾಯ್ಕ ಹಾಗೂ ಸಿಬ್ಬಂದಿಗಳಾದ ದಿನೇಶ್ ನಾಯಕ, ಸತೀಶ ಭಟ್ಟ, ರವಿ ಪಟಗಾರ, ಜಗದೀಶ್ ನಾಯ್ಕ, ಕಿರಣ ಪಾಟೀಲ, ಮಲ್ಲಿಕಾರ್ಜುನ ಉಟಗಿ ಮತ್ತು ವಿದ್ಯಾ ಆಚಾರಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಬAಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

About The Author

error: Content is protected !!