ಹೊನ್ನಾವರ : ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಹೊನ್ನಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರ ಎಂ. ಜಿ. ನಾಯ್ಕರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಈ ಹಿಂದೆ ಹೊನ್ನಾವರ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾಗಿ ಪ್ರಧಾನ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ತಮ್ಮ ಅತ್ಯುತ್ತಮ ಕಾರ್ಯನಿರ್ವಹಣೆಯಿಂದ ತಾಲೂಕಿನ, ಜಿಲ್ಲೆಯ ಶಿಕ್ಷಕರ ಪ್ರಶಂಸೆಗೆ ಪಾತ್ರರಾಗಿದ್ದವರು. ಅಷ್ಟೇ ಅಲ್ಲದೇ ಹೊನ್ನಾವರ ತಾಲೂಕಾ ಸರಕಾರಿ ನೌಕರ ಸಂಘದ 2 ಬಾರಿ ಉಪಾಧ್ಯಕ್ಷರಾಗಿ, ರಾಜ್ಯ ಪರಿಷತ್ ಸದಸ್ಯರಾಗಿ, ಪ್ರಸ್ತುತ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಸ್ತುತ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಇವರ ಪ್ರಾಮಾಣಿಕ ಸೇವೆ ಶಿಕ್ಷಕರ ಸಮಸ್ಯೆಗಳಿಗೆ ಸದಾ ಧ್ವನಿಯಾಗಿ ಮಂಚೂಣಿಯಲ್ಲಿ ನಿಂತು ಕೆಲಸ ಮಾಡಿದ್ದು, ಜೊತೆಗೆ ಒಬ್ಬ ಅದ್ಭುತ ಸಂಘಟಕನಾಗಿ ಶಿಕ್ಷಣ ಇಲಾಖೆಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ ಒಬ್ಬ ಅಪರೂಪದ, ಪ್ರಾಮಾಣಿಕ ಶಿಕ್ಷಕರಾಗಿ ತಾಲೂಕು ಜಿಲ್ಲೆಯಾದ್ಯಂತ ಗುರುತಿಸಿಕೊಂಡಿದ್ದರು. ಇವರ ಆಯ್ಕೆಗೆ ತಾಲೂಕಿನ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿದ್ದು, ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಶಿಕ್ಷಣ ಸಂಯೋಜಕರು, ದೈಹಿಕ ಶಿಕ್ಷಣ ಪರಿವೀಕ್ಷಕರು, ಸಿಬ್ಬಂದಿಗಳು, ಸಿ.ಆರ್.ಪಿ.ಗಳು, ಬಿ.ಆರ್.ಪಿ.ಗಳು, ಬಿ.ಆಯ್.ಆರ್.ಪಿ.ಗಳು ಅಭಿನಂದಿಸಿದ್ದಾರೆ.


More Stories
ನೀಲಗೋಡ ಯಕ್ಷಚೌಡೇಶ್ವರಿ ಸನ್ನಿಧಿಯಲ್ಲಿ ಆಷಾಢ ಅಮವಾಸ್ಯೆ ವಿಶೇಷ ಪೂಜೆ: ಭಕ್ತರ ಕಷ್ಟ ಕಾರ್ಪಣ್ಯ ನೀಗಿಸುವ ಶಕ್ತಿ ಕ್ಷೇತ್ರ
ಹೊನ್ನಾವರ ತಾಲೂಕಾ ಒಕ್ಕಲಿಗರ ಸಂಘಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ: ಅಧ್ಯಕ್ಷರಾಗಿ ಕೃಷ್ಣ ಜಟ್ಟಿ ಗೌಡ ಅವಿರೋಧ ಆಯ್ಕೆ
ಶಿಕ್ಷಣದೊಂದಿಗೆ ಬದುಕಿನ ಕೌಶಲ್ಯ ಹಾಗೂ ವ್ಯವಹಾರವನ್ನು ಕಲಿಯುವುದು ಮುಖ್ಯ: ರೋ. ಡಾ. ಅನಂತಮೂರ್ತಿ ಶಾಸ್ತ್ರಿ