May 23, 2026

ಮುರ್ಡೇಶ್ವರ ಠಾಣಾ ವ್ಯಾಪ್ತಿಯ ಇಬ್ಬರು ರೌಡಿಶೀಟರ್‌ಗಳಿಗೆ 6 ತಿಂಗಳ ಗಡಿಪಾರು

ಭಟ್ಕಳ: ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ಬರು ರೌಡಿಶೀಟರ್‌ಗಳನ್ನು ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಮಾವಳ್ಳಿ-2 ನಿವಾಸಿ ಶೇಖರ ಮಂಜುನಾಥ ನಾಯ್ಕ (25) ಹಾಗೂ ಕೋಣಾರ ಕೆರೆಹಿತ್ತಲ ನಿವಾಸಿ ಮಿಥುನ ಕುಪ್ಪಯ್ಯ ನಾಯ್ಕ (27) ಗಡಿಪಾರುಗೊಂಡವರು. ಇವರ ವಿರುದ್ಧ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಇಬ್ಬರ ಮೇಲೂ ರೌಡಿ ಹಾಳೆ ತೆರೆಯಲಾಗಿದ್ದು, ಚಲನವಲನಗಳ ಮೇಲೆ ಪೊಲೀಸ್ ಇಲಾಖೆ ನಿಗಾ ವಹಿಸಿತ್ತು.

ಆದರೂ ಇಬ್ಬರೂ ಕ್ರಿಮಿನಲ್ ಚಟುವಟಿಕೆ ಮುಂದುವರಿಸಿರುವುದು ಕಂಡುಬAದ ಹಿನ್ನೆಲೆ, ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಪರಿಗಣಿಸಿ ಮುರ್ಡೇಶ್ವರ ಪೊಲೀಸ್ ಠಾಣೆಯವರು ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ) ಮತ್ತು (ಬಿ) ಅಡಿಯಲ್ಲಿ ಮೇ 20ರಂದು ಆದೇಶ ಹೊರಡಿಸಿದ್ದಾರೆ.

ಆದೇಶದಂತೆ ಶೇಖರ ನಾಯ್ಕನನ್ನು ತುಮಕೂರು ಜಿಲ್ಲೆಯ ಹೊಸಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಗೆ ಹಾಗೂ ಮಿಥುನ ನಾಯ್ಕನನ್ನು ವಿಜಯಪುರ ಜಿಲ್ಲೆಯ ಗಾಂಧಿ ಚೌಕ ಪೊಲೀಸ್ ಠಾಣಾ ವ್ಯಾಪ್ತಿಗೆ ತಕ್ಷಣದಿಂದ ಜಾರಿಗೆ ಬರುವಂತೆ 6 ತಿಂಗಳ ಕಾಲ ಗಡಿಪಾರು ಮಾಡಲಾಗಿದೆ. ಮುರ್ಡೇಶ್ವರ ಪೊಲೀಸ್ ಠಾಣೆಯ ಅಧಿಕಾರಿಗಳು ಇಬ್ಬರನ್ನೂ ಸಂಬAಧಪಟ್ಟ ಠಾಣಾಧಿಕಾರಿಗಳ ಮುಂದೆ ಹಾಜರುಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

About The Author

error: Content is protected !!