ಬೆಳಗಾವಿ : ಜಿಲ್ಲೆಯ ಅಥಣಿ ತಾಲೂಕಿನ ಅಥಣಿ ಪಟ್ಟಣದಲ್ಲಿ ಇಂದು ಸಾಯಂಕಾಲ ಭಾರೀ ಬಿರುಗಾಳಿ ಸಮೇತ ಅಲ್ಪ ಪ್ರಮಾಣದ ಮಳೆಯಾಗಿದ್ದು, ಹಲವೆಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿದ ಘಟನೆಗಳು ವರದಿಯಾಗಿವೆ.

ಅಥಣಿಯ ನ್ಯಾಯಾಲಯದ ಎದುರಿನಲ್ಲಿರುವ ಜೆ.ಎ ಹೈಸ್ಕೂಲ್ ಕಾಂಪ್ಲೆಕ್ಸ್ ಮುಂಭಾಗದಲ್ಲಿ ದೊಡ್ಡ ಮರ ಹಾಗೂ ವಿದ್ಯುತ್ ತಂತಿಗಳು ಬಿದ್ದಿದ್ದು, ಸಾರ್ವಜನಿಕರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಇದೇ ವೇಳೆ ಐನಾಪುರ್ ರಸ್ತೆಯಲ್ಲಿರುವ ಅಥಣಿ ಪ್ರವಾಸಿ ಮಂದಿರದ ಎದುರು ಗಿಡಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.

ಸದ್ಯ ಈ ಅವಘಡಗಳಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿರುವುದಿಲ್ಲ ಎಂದು ತಿಳಿದುಬಂದಿದೆ. ಆದರೆ ಬಿರುಗಾಳಿ ಹಾಗೂ ಮಳೆಯ ಪರಿಣಾಮ ಜನಜೀವನದಲ್ಲಿ ವ್ಯತ್ಯಯ ಉಂಟಾಗಿದೆ. ಇಂತಹ ಅಕಸ್ಮಿಕ ಗಾಳಿ-ಮಳೆಯ ಸಂದರ್ಭಗಳಲ್ಲಿ ಸಾರ್ವಜನಿಕರು ಜಾಗರೂಕರಾಗಿ ಇರಬೇಕು ಎಂದು ಜೆಡಿಎಸ್ ಪಕ್ಷದ ಮುಖಂಡ ಇಮತಿಯಾಜ್ ಹಿಪ್ಪರಗಿ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆ ಹಾಗೂ ಬಿರುಗಾಳಿಯ ಮುನ್ಸೂಚನೆ ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆ ಜನರು ಎಚ್ಚರಿಕೆಯಿಂದ ಇರಬೇಕಾಗಿದೆ.
ವರದಿ : ಮಹೇಶ್ ಶರ್ಮಾ, ಬೆಳಗಾವಿ

About The Author


More Stories
ಅಥಣಿಯ ಶಿವಯೋಗಿ ನಗರದಲ್ಲಿ ಮೂಲಭೂತ ಸೌಕರ್ಯಗಳ ಅಭಾವ: ಹೆದ್ದಾರಿಯಲ್ಲಿ ‘ಸ್ಪೀಡ್ ಬ್ರೇಕರ್’, ಶಾಲಾ ಮೇಲ್ದರ್ಜೆಗೆ ಸ್ಥಳೀಯರ ಉಗ್ರ ಆಗ್ರಹ.
ಅಥಣಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ರಾಜು ಡವರಿ ಅವರಿಂದ ಧ್ವಜಾರೋಹಣ
ಮದಭಾವಿಯಲ್ಲಿ ಸಡಗರದ ಸ್ವಾತಂತ್ರ್ಯ ದಿನಾಚರಣೆ: ವೀರಯೋಧರಿಂದ ಜಂಟಿ ಧ್ವಜಾರೋಹಣ