ಭಟ್ಕಳ: ಮುರಿನಕಟ್ಟೆ ವಿವಾದದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಭಟ್ಕಳದಲ್ಲಿ ಪೊಲೀಸರು ಬೃಹತ್ ರೂಟ್ ಮಾರ್ಚ ನಡೆಸಿ ಕಟ್ಟೆಚ್ಚರ ವಹಿಸಿದರು.
ವಿಶೇಷ ಕ್ರಿಯಾ ಪಡೆ (SAF) ಸೇರಿದಂತೆ 500ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಪಟ್ಟಣದ ಪ್ರಮುಖ ರಸ್ತೆ, ಬೀದಿಗಳು ಹಾಗೂ ವಿವಿಧ ಮೊಹಲ್ಲಾಗಳಲ್ಲಿ ಪಥಸಂಚಲನ ನಡೆಸಿದರು. ಮುರಿನಕಟ್ಟೆ ಘಟನೆಯ ಬಳಿಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಿದೆ.

ರೂಟ್ ಮಾರ್ಚ ವೇಳೆ ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ ಶಾಂತಿ ಹಾಗೂ ಸೌಹಾರ್ದತೆ ಕಾಪಾಡಬೇಕು ಎಂದು ಪೊಲೀಸರು ಮನವಿ ಮಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಅಪಪ್ರಚಾರಗಳಿಗೆ ಮರುಳಾಗಬಾರದು, ಯಾವುದೇ ಅನುಮಾನಾಸ್ಪದ ಮಾಹಿತಿ ಕಂಡುಬAದರೆ ತಕ್ಷಣ ಪೊಲೀಸರಿಗೆ ತಿಳಿಸಬೇಕು ಎಂದು ಸೂಚಿಸಿದರು. ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಈ ಪಥಸಂಚಲನ ಪಟ್ಟಣದ ವಿವಿಧ ಭಾಗಗಳಲ್ಲಿ ಸಂಚರಿಸಿ ಭದ್ರತಾ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸಿತು. ಮುರಿನಕಟ್ಟೆ ವಿವಾದದ ಹಿನ್ನೆಲೆ ಭಟ್ಕಳದಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ನಿಗಾ ಮುಂದುವರಿಸಿದೆ.


About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ