May 27, 2026

ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಬಿಜೆಪಿ ಮಾಜಿ ಶಾಸಕ ಸುನೀಲ್ ನಾಯ್ಕ ಆಕ್ರೋಶ

ಭಟ್ಕಳ: ಪಟ್ಟಣದ ಧಾರ್ಮಿಕ ಮಹತ್ವದ ಸ್ಥಳವಾದ ಮುರಿನಕಟ್ಟೆ ಹಾನಿಗೊಳಗಾದ ಘಟನೆಗೆ ಸಂಬAಧಿಸಿ ಬಿಜೆಪಿ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಸುನೀಲ್ ನಾಯ್ಕ, ಮುರಿನಕಟ್ಟೆ ಹಿಂದೂ ಸಮುದಾಯದ ನಂಬಿಕೆ ಹಾಗೂ ಆಚರಣೆಗಳಿಗೆ ಸಂಬAಧಿಸಿದ ಸ್ಥಳವಾಗಿದ್ದು, ಅಲ್ಲಿ ನಡೆದ ಘಟನೆ ಭಟ್ಕಳದ ಜನರಲ್ಲಿ ಅಸಮಾಧಾನ ಮೂಡಿಸಿದೆ ಎಂದು ಹೇಳಿದರು. ಘಟನೆ ವೇಳೆ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದರೂ ಹಾನಿ ತಡೆಯಲು ಸಾಧ್ಯವಾಗದಿರುವುದು ಪ್ರಶ್ನೆಗೆ ಕಾರಣವಾಗಿದೆ. ಇದರಿಂದ ಕಾನೂನು ಸುವ್ಯವಸ್ಥೆ ಬಗ್ಗೆ ಜನರಲ್ಲಿ ಆತಂಕ ಮೂಡಿದೆ ಎಂದು ಅವರು ಆರೋಪಿಸಿದರು.

ಘಟನೆ ಬಳಿಕ ಆಡಳಿತದ ಪ್ರತಿಕ್ರಿಯೆ ಸಮರ್ಪಕವಾಗಿಲ್ಲ. ಸ್ಥಳದ ಮಹತ್ವ ಹಾಗೂ ಜನರ ಭಾವನೆಗಳನ್ನು ಅರಿತು ಅಧಿಕಾರಿಗಳು ಮಾತನಾಡಬೇಕು. ಸಾರ್ವಜನಿಕರ ಭಾವನೆಗೆ ನೋವಾಗದ ರೀತಿಯಲ್ಲಿ ಸರ್ಕಾರ ನಡೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಮುರಿನಕಟ್ಟೆ ಸ್ಥಳಕ್ಕೆ ಸರ್ಕಾರದಿಂದ ಯಾವುದೇ ಅನುದಾನ ನೀಡಿಲ್ಲ. ಸ್ಥಳದ ಪುನರ್‌ನಿರ್ಮಾಣದ ಅಗತ್ಯ ಬಂದರೆ ಅದನ್ನು ಸಮಾಜದ ಸಹಕಾರದಿಂದಲೇ ಕೈಗೆತ್ತಿಕೊಳ್ಳಲಾಗುವುದು ಎಂದು ಸುನೀಲ ನಾಯ್ಕ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಶಿವಾನಂದ ನಾಯ್ಕ, ಘಟನೆ ಬಳಿಕ ಜವಾಬ್ದಾರಿಯುತ ನಾಯಕರು ಸ್ಥಳಕ್ಕೆ ಭೇಟಿ ನೀಡಿ ಜನರೊಂದಿಗೆ ಮಾತನಾಡಬೇಕಿತ್ತು. ಆದರೆ ಆ ರೀತಿಯ ಪ್ರಯತ್ನ ಕಂಡುಬAದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿ ಮುಖಂಡ ಗೋವಿಂದ ನಾಯ್ಕ ಮಾತನಾಡಿ, ಮುರಿನಕಟ್ಟೆ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಹೇಳಿಕೆಗಳು ಹೊರಬರುತ್ತಿವೆ. ಘಟನೆಯ ನಿಜಸ್ವರೂಪವನ್ನು ಆಡಳಿತ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ ನಾಯ್ಕ, ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಜನರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗದAತೆ ಸರ್ಕಾರ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತರಾಮ ಭಟ್ಕಳ, ದಿನೇಶ ನಾಯ್ಕ, ಖೇದಾರ ಕೊಲ್ಲೆ, ಪರಮೇಶ್ವರ ಮೇಸ್ತ, ಶ್ರೀನಿವಾಸ ನಾಯ್ಕ, ಶ್ರೀಧರ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

About The Author

error: Content is protected !!