ವಿಜಯನಗರ : ಡಾ. ಎನ್.ಟಿ. ಶ್ರೀನಿವಾಸ್ ಅವರ ತಂದೆ, ಮಾಜಿ ಶಾಸಕ ದಿವಂಗತ ಎನ್.ಟಿ. ಬೊಮ್ಮಣ್ಣ ಅವರ ಸ್ಮರಣಾರ್ಥವಾಗಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿಯಲ್ಲಿ ಭಾರಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ಕಾನಾಹೊಸಹಳ್ಳಿಯ ವಿದ್ಯಾನಿಕೇತನ ಶಾಲಾ ಆವರಣದಲ್ಲಿ ಮೇ 24ರಂದು ನಡೆದ ಈ ಶಿಬಿರವನ್ನು ತುಮಕೂರಿನ ಅಕ್ಷರ ಐ ಫೌಂಡೇಶನ್ ಕಣ್ಣಿನ ಆಸ್ಪತ್ರೆ, ಎನ್.ಟಿ. ಬೊಮ್ಮಣ್ಣ ಅಭಿಮಾನಿಗಳ ಬಳಗ ಹಾಗೂ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅಭಿಮಾನಿ ಬಳಗದ ಸಹಯೋಗದಲ್ಲಿ ನಡೆಸಲಾಯಿತು.
ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣೆ ಸೇರಿದಂತೆ ವಿವಿಧ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಯಿತು. ಸುಮಾರು 2000ಕ್ಕೂ ಅಧಿಕ ಜನರು ಆರೋಗ್ಯ ತಪಾಸಣೆಗೆ ಒಳಗಾದರು. ಇವರಲ್ಲಿ 500ಕ್ಕೂ ಹೆಚ್ಚು ಮಂದಿಗೆ ವಿವಿಧ ರೀತಿಯ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ಶಿಫಾರಸು ಮಾಡಿದರು. ಈ 500 ಮಂದಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಹಾಗೂ ಅಗತ್ಯ ಔಷಧೋಪಚಾರವನ್ನು ಉಚಿತವಾಗಿ ಒದಗಿಸಲಾಗುವುದು ಎಂದು ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ತಿಳಿಸಿದ್ದಾರೆ.
ಶಿಬಿರದಲ್ಲಿ ಮಕ್ಕಳಿಂದ ಹಿಡಿದು ಮಹಿಳೆಯರು, ವೃದ್ಧರು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ತುಮಕೂರು ಹಾಗೂ ಬೆಂಗಳೂರಿನ ಖ್ಯಾತ ಆಸ್ಪತ್ರೆಗಳಿಂದ ಆಗಮಿಸಿದ್ದ ಹೃದಯ, ಎಲುಬು, ಸ್ತ್ರೀ ಮತ್ತು ಮಕ್ಕಳ ತಜ್ಞ ವೈದ್ಯರು ಸೇವೆ ಸಲ್ಲಿಸಿದರು. ಶಿಬಿರವನ್ನು ಶಾಸಕ ಪತ್ನಿ ಡಾ. ಪುಷ್ಪ ಎನ್.ಟಿ. ಶ್ರೀನಿವಾಸ್ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಅಕ್ಷರ ಐ ಫೌಂಡೇಶನ್ ವೈದ್ಯರು ಮತ್ತು ಸಿಬ್ಬಂದಿ ಶಿಬಿರದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾನಿಕೇತನ ಶಾಲೆಯ ಮುಖ್ಯಸ್ಥ ಕಾನಾಮಡಗು ಶಶಿಧರ ಸ್ವಾಮಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಟಿ. ನರಸಪ್ಪ, ಸ್ಥಳೀಯ ಮುಖಂಡರು, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಶಿಬಿರಕ್ಕೆ ಆಗಮಿಸಿದ್ದ ಸಾವಿರಾರು ಜನರಿಗೆ ಬೆಳಗಿನ ಉಪಹಾರ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆಯನ್ನೂ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಮಾಡಿಸಿದ್ದರು. ಕಾನಾಹೊಸಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಶಿಬಿರದ ಸದುಪಯೋಗ ಪಡೆದುಕೊಂಡರು.


More Stories
ಶಿವಲೀಲಾ ಹುಣಸಗಿಯವರಿಗೆ “ಕರ್ನಾಟಕ ಶಿರೋಮಣಿ ರಾಜ್ಯ ಪ್ರಶಸ್ತಿ