85% ಕ್ಕಿಂತ ಹೆಚ್ಚು ಅಂಕ ಪಡೆದ 2000ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸನ್ಮಾನ


ಅಥಣಿ : ತಾಲೂಕಿನ ಕೃಷ್ಣಾ ರೈತ ಸಭಾ ಭವನದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಭವ್ಯವಾಗಿ ನಡೆಯಿತು. ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ 85% ಕ್ಕಿಂತ ಹೆಚ್ಚು ಅಂಕ ಪಡೆದ ಅಥಣಿ ತಾಲೂಕಿನ 2000ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮದಲ್ಲಿ ಸತ್ಕರಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಲಕ್ಷ್ಮಣ ಸವದಿ ಅವರು, ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಶಿಕ್ಷಣವೇ ಭವಿಷ್ಯದ ಬಲವಾದ ಅಸ್ತಿವಾರ. ವಿದ್ಯಾರ್ಥಿಗಳು ನಿರಂತರ ಪರಿಶ್ರಮ ಹಾಗೂ ಶಿಸ್ತು ಮೂಲಕ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು ಎಂದು ಕರೆ ನೀಡಿದರು. ಜೊತೆಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಿವಬಸವ ಸ್ವಾಮೀಜಿ, ಡಾ. ಮಹಾಂತಪ್ರಭು ಸ್ವಾಮೀಜಿ ಆಶೀರ್ವಚನ ನೀಡಿದರು. ವಿಶೇಷ ಉಪನ್ಯಾಸಕರಾಗಿ ಶರಣಯ್ಯ ಭಂಡಾರಿಮಠ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಪೋಷಕರು, ಸಾರ್ವಜನಿಕರು ಹಾಗೂ ಅಥಣಿ ತಾಲೂಕಿನ ಸಮಸ್ತ ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳ ಸಾಧನೆಯನ್ನು ಸಂಭ್ರಮಿಸಿದರು.
ವರದಿ : ಮಹೇಶ ಶರ್ಮಾ

More Stories
ಶಿವಯೋಗಿ ನಗರದಲ್ಲಿ ಕಣ್ಣು ಮುಚ್ಚಿ ಕುಳಿತ ಹೆಸ್ಕಾಂ; ಲೈವ್ ವೈರ್ ಕಟ್ ಆಗಿದ್ದರೂ ಕರಗದ ಅಧಿಕಾರಿಗಳ ನಿರ್ಲಕ್ಷ್ಯ
ಮಾದರಿ ಹಸಿರು ಕಾರ್ಯಕ್ರಮ: ಅಥಣಿಯಲ್ಲಿ ‘ಭರವಸೆ ಬೆಳಕು ಫೌಂಡೇಶನ್’ ವತಿಯಿಂದ ಅದ್ದೂರಿ ಸಸಿ ನೆಡುವ ಅಭಿಯಾನ
ಬೆಳಗಾವಿ ಜಿಲ್ಲೆ ಅಥಣಿ ತಾಲೂಕು: ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಅವರಿಗೆ ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆಯಿಂದ ಸನ್ಮಾನ