ಬೆಳಗಾವಿ : ಜಿಲ್ಲೆಯ ಅಥಣಿ ತಾಲೂಕಿನ ಅಥಣಿ ಪಟ್ಟಣದಲ್ಲಿ ಬಕ್ರೀದ್ (ಈದುಲ್ ಅಜ್ಹಾ) ಹಬ್ಬವನ್ನು ಭಕ್ತಿಭಾವ ಮತ್ತು ಸಂಭ್ರಮದಿAದ ಆಚರಿಸಲಾಯಿತು. ಪಟ್ಟಣದ ಇದಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸಿ ಹಬ್ಬದ ಆಚರಣೆಯಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕರಾದ ಶಹಜಾನ್ ಡೊಂಗರಗಾAವ ಅವರು, ಇಂದು ಇಡೀ ಜಗತ್ತಿನಾದ್ಯಂತ ಈದುಲ್ ಅಜ್ಹಾ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಹಾಗೂ ವಿಶೇಷವಾಗಿ ಅಥಣಿ ತಾಲೂಕಿನ ಜನತೆಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ ಎಂದು ಹೇಳಿದರು.

ಬಕ್ರೀದ್ ಹಬ್ಬವು ತ್ಯಾಗ ಮತ್ತು ಬಲಿದಾನದ ಪ್ರತೀಕವಾಗಿದ್ದು, ಪ್ರವಾದಿ ಇಬ್ರಾಹಿಂ ಅಲೈಸಲಾಂ ಅವರು ದೇವರ ಆದೇಶ ಪಾಲನೆಗಾಗಿ ತಮ್ಮ ಅತಿ ಪ್ರೀತಿಯ ವಸ್ತುವನ್ನೇ ತ್ಯಾಗ ಮಾಡಲು ಸಿದ್ಧರಾದ ಘಟನೆಯನ್ನು ಸ್ಮರಿಸುವ ಹಬ್ಬವಾಗಿದೆ ಎಂದು ಅವರು ವಿವರಿಸಿದರು.

ಇದೇ ವೇಳೆ ಜಗತ್ತಿನ ವಿವಿಧ ರಾಷ್ಟ್ರಗಳಿಂದ ಮುಸ್ಲಿಂ ಬಾಂಧವರು ಮಕ್ಕಾ ನಗರಕ್ಕೆ ತೆರಳಿ ಹಜ್ ಯಾತ್ರೆ ಕೈಗೊಂಡಿರುವುದನ್ನು ಉಲ್ಲೇಖಿಸಿದ ಅವರು, ಹಜ್ ಯಾತ್ರೆಗೆ ತೆರಳಿರುವ ಕೋಟ್ಯಂತರ ಭಕ್ತರ ಎಲ್ಲಾ ವಿಧಿವಿಧಾನಗಳನ್ನು ದೇವರು ಯಶಸ್ವಿಯಾಗಿ ಪೂರ್ಣಗೊಳಿಸಲಿ ಎಂದು ಪ್ರಾರ್ಥಿಸಿದರು. ಪ್ರಾರ್ಥನೆಯ ವೇಳೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿ, ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ಸಮೃದ್ಧ ಬೆಳೆ ದೊರಕಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಕುರಿತು ಸಹ ಮಾಹಿತಿ ನೀಡಲಾಗಿದ್ದು, ಜೂನ್ ಅಥವಾ ಜುಲೈ ತಿಂಗಳಲ್ಲಿ ನಡೆಯಲಿರುವ ಪರಿಷ್ಕರಣೆಯಲ್ಲಿ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಜಾಗರೂಕರಾಗಬೇಕು ಎಂದು ಮೌಲಾನಾಗಳು ಕರೆ ನೀಡಿದರು. ನಾವು ಎಲ್ಲರೂ ಭಾರತೀಯರು. ಹಿಂದೂ-ಮುಸ್ಲಿA ಸಹೋದರತ್ವ, ಪ್ರೀತಿ, ಶಾಂತಿ ಮತ್ತು ಸಮೃದ್ಧಿಯಿಂದ ಬದುಕಬೇಕು ಎಂದು ಶಹಜಾನ್ ಡೊಂಗರಗಾAವ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಇಮತಿಯಾಜ್ ಹಿಪ್ಪರಗಿ ಮಾತನಾಡಿ, ಬಕ್ರೀದ್ ಹಬ್ಬವು ತ್ಯಾಗ ಮತ್ತು ಬಲಿದಾನದ ಸಂಕೇತವಾಗಿದೆ. ಇಂದಿನ ಯುವಜನತೆ ದುಶ್ಚಟಗಳಿಂದ ದೂರವಿದ್ದು ಉತ್ತಮ ಜೀವನ ನಡೆಸಲೆಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಹೇಳಿದರು. ಜೊತೆಗೆ ಕರ್ನಾಟಕ ಹಾಗೂ ಬೆಳಗಾವಿ ಜಿಲ್ಲೆಯ ಜನತೆಗೆ ಜೆಡಿಎಸ್ ಪಕ್ಷದ ವತಿಯಿಂದ ಬಕ್ರೀದ್ ಹಬ್ಬದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಹಲವಾರು ಮುಸ್ಲಿಂ ಬಾಂಧವರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ವರದಿ : ಮಹೇಶ ಶರ್ಮಾ

More Stories
ಅಥಣಿಯಲ್ಲಿ ವರದಕ್ಷಿಣೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ
ಅಥಣಿ ಸಹಕಾರಿ ರಂಗದಲ್ಲಿ ಹೊಸ ಇತಿಹಾಸ PKPS ಸೊಸೈಟಿಗಳಿಗೆ ಡಿಸಿಸಿ ಬ್ಯಾಂಕ್ ನಿರ್ದೇಶಕಿ ಸುನಿತಾ ಐಹೋಳೆ ಭೇಟಿ, ರೈತರ ಸಮಸ್ಯೆಗಳಿಗೆ ಸ್ಪಂದನೆ
ಅಥಣಿಯಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ