ಭಟ್ಕಳ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿದ್ದ ಯುವಕನ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಲಿಯ ತಗ್ಗರಗೋಡ ಬದ್ರಿಯಾ ಕಾಲೋನಿಯ ನಿವಾಸಿ ಫೈಜಾನ್ (28) ಎಂಬಾತ ಫಿರ್ದೋಸನಗರ ಕೋಳಿ ಫಾರ್ಮ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅಮಲಿನಲ್ಲಿದ್ದು ವಿಚಿತ್ರವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ಅನುಮಾನಗೊಂಡ ಪೊಲೀಸರು ಆತನನ್ನು ವಿಚಾರಣೆ ನಡೆಸಿದ ವೇಳೆ ಬಾಯಿಯಿಂದ ಗಾಂಜಾ ಮಾದರಿಯ ತೀವ್ರ ವಾಸನೆ ಬರುತ್ತಿರುವುದು ಗಮನಕ್ಕೆ ಬಂದಿದೆ.

ಬಳಿಕ ಆತನನ್ನು ವಶಕ್ಕೆ ಪಡೆದು ಸರ್ಕಾರಿ ಆಸ್ಪತ್ರೆ,ಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು,
ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ. ಮಲ್ಲಿಕಾರ್ಜುನಯ್ಯ ಕೊರಾಣಿ ಅವರು ಸರ್ಕಾರದ ಪರವಾಗಿ ನೀಡಿದ ದೂರಿನ ಮೇರೆಗೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.


More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ