

ಭಟ್ಕಳ: ತಾಲ್ಲೂಕಿನ ನಗರ ಪ್ರದೇಶದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ನಿಯಮ ಉಲ್ಲಂಘನೆ ವಿರುದ್ಧ ಆರೋಗ್ಯ ಇಲಾಖೆ ಮತ್ತು ತಂಬಾಕು ನಿಯಂತ್ರಣ ದಳದ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ 16 ಅಂಗಡಿಗಳ ಪರಿಶೀಲನೆ ನಡೆಸಿದರು.


ನಗರದ ಶಂಸುದ್ದೀನ್ ಸರ್ಕಲ್ ಸೇರಿದಂತೆ ವಿವಿಧ ಪ್ರದೇಶಗಳ ಅಂಗಡಿಗಳಲ್ಲಿ ತಪಾಸಣೆ ವೇಳೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆ ಹಾಗೂ ಅಂಗಡಿಗಳಲ್ಲಿ ತಂಬಾಕು ಸೇವನೆಗೆ ಅವಕಾಶ ನೀಡಿರುವುದು ಪತ್ತೆಯಾಯಿತು. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಂಗಡಿಗಳ ವಿರುದ್ಧ ಕ್ರಮ ಕೈಗೊಂಡು ಒಟ್ಟು ₹2,600 ದಂಡ ವಿಧಿಸಲಾಯಿತು.


ಕಾರ್ಯಾಚರಣೆಯಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಿವಾಸ್ ಆರ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ರಾಮು, ತಾಲೂಕು ವ್ಯವಸ್ಥಾಪಕ ಅನಂತ ಮೊಗೇರ್, ಸಿಡಿಪಿಒ ಸುಶೀಲಾ ಮೊಗೇವಿರ, ಆಹಾರ ನಿರೀಕ್ಷಕ ಉದಯ ತಲವಾರ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ಶಿರಾಲಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.


ಆರೋಗ್ಯ ಇಲಾಖೆ ಮುಂದಿನ ದಿನಗಳಲ್ಲಿಯೂ ತಂಬಾಕು ನಿಯಂತ್ರಣ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಇಂತಹ ಕಾರ್ಯಾಚರಣೆಗಳನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ತಿಳಿಸಿದೆ.



About The Author




More Stories
ಅಡಿಕೆ ಕೊಯ್ಯುವಾಗ ಆಕಸ್ಮಿಕ ವಿದ್ಯುತ್ ಸ್ಪರ್ಶ: 11 ಕೆ.ವಿ. ತಂತಿಗೆ ಏಣಿ ತಾಗಿ ಕೃಷಿಕ ದಾರುಣ ಸಾವು!
ಸರ್ಕಾರಿ ನೌಕರರ ಮನ್ಸೂನ್ ಟ್ರೋಫಿ: ಎನ್ಎಸ್ಸಿ ತಂಡಕ್ಕೆ ಚಾಂಪಿಯನ್ ಪಟ್ಟ!
ತೆರೆದ ಚರಂಡಿ ಹೊಂಡ: ಅಪಾಯದ ನಡುವೆ ಭಟ್ಕಳದ ವಾಹನ ಸವಾರರ ಸಂಚಾರ.