

ಹಿರೇಗುತ್ತಿ: “ವಿಶ್ವ ಪರಿಸರ ದಿನಾಚರಣೆ–2026” ಪ್ರಯುಕ್ತ ಜಿಲ್ಲಾ ವಿಜ್ಞಾನ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಾರವಾರ ಇವರು ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರಬಂಧ ಸ್ಪರ್ಧೆಯಲ್ಲಿ ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲ್ ವಿದ್ಯಾರ್ಥಿನಿ ಎನ್.ವಿ. ಇಂಪನಾ ಅವರು ಜಿಲ್ಲೆಗೆ ತೃತೀಯ ಸ್ಥಾನ ಪಡೆದು ಶಾಲೆ ಹಾಗೂ ಊರಿಗೆ ಕೀರ್ತಿ ತಂದಿದ್ದಾರೆ.
ಪರಿಸರ ಜಾಗೃತಿ ಮತ್ತು ಸಂರಕ್ಷಣೆಯ ಕುರಿತು ನಡೆದ ಈ ಸ್ಪರ್ಧೆಯಲ್ಲಿ ಇಂಪನಾ ಅವರು ತಮ್ಮ ಅತ್ಯುತ್ತಮ ಬರವಣಿಗೆಯ ಮೂಲಕ ಗಮನ ಸೆಳೆದಿದ್ದಾರೆ. ಈ ಸಾಧನೆಗೆ ಶಾಲೆಯ ವಿಜ್ಞಾನ ಶಿಕ್ಷಕರಾದ ಮಹಾದೇವ ಬಿ. ಗೌಡ ಅವರು ಮಾರ್ಗದರ್ಶನ ನೀಡಿದ್ದರು.

ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಹೊನ್ನಪ್ಪ ಎನ್ ನಾಯಕ.ಉಪಾಧ್ಯಕ್ಷರು, ಸರ್ವ ಸದಸ್ಯರು, ಮುಖ್ಯಾಧ್ಯಾಪಕರು, ಶಿಕ್ಷಕ ವೃಂದ, ಪೋಷಕರು ಹಾಗೂ ಊರಿನ ನಾಗರಿಕರು ಅಭಿನಂದನೆ ಸಲ್ಲಿಸಿದ್ದಾರೆ.

About The Author




More Stories
ಹಿರೇಗುತ್ತಿ ಹೈಸ್ಕೂಲಿನಲ್ಲಿ ಮಕ್ಕಳ ರಕ್ಷಣಾ ಕಾಯ್ದೆಗಳ ಅರಿವು ಜಾಗೃತಿ ಕಾರ್ಯಕ್ರಮ
ಹಿರೇಗುತ್ತಿ ಹೈಸ್ಕೂಲಿನಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ‘ವ್ಯಸನ ಮುಕ್ತ ದಿನಾಚರಣೆ’
ಮಿರ್ಜಾನ್ ಬಿಜಿಎಸ್ ಸೆಂಟ್ರಲ್ ಸ್ಕೂಲಿನಲ್ಲಿ ಭಕ್ತಿ-ಶ್ರದ್ಧೆಯಿಂದ ನಡೆದ ‘ಗುರು ಪೂರ್ಣಿಮೆ’ ಆಚರಣೆ