ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಇಂದು ರಾಜ್ಯ ಹಾಗೂ ಬೆಂಗಳೂರು ಮಹಾನಗರ ಒಬಿಸಿ ಮೋರ್ಚಾ ಪದಾಧಿಕಾರಿಗಳ ವಿಶೇಷ ಪೂರ್ವಭಾವಿ ಸಭೆ ಜರುಗಿತು.

ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ರಘು ಕೌಟಿಲ್ಯ ಅವರು ಇಂದು ನೂತನ ವಿಧಾನ ಪರಿಷತ್ ಸದಸ್ಯರಾಗಿ (MLC) ಪ್ರಮಾಣವಚನ ಸ್ವೀಕರಿಸಿದರು. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಒಬಿಸಿ ಮೋರ್ಚಾ ಪದಾಧಿಕಾರಿಗಳ ವತಿಯಿಂದ ಅವರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಆತ್ಮೀಯವಾಗಿ ಗೌರವಿಸಿ, ಅಭಿನಂದನೆಗಳನ್ನು ಸಲ್ಲಿಸಲಾಯಿತು.
ಅಲ್ಲದೆ, ರಘು ಕೌಟಿಲ್ಯ ಅವರು ವಿಧಾನ ಪರಿಷತ್ ಸದಸ್ಯರಾಗಿ ಹಾಗೂ ಹಿಂದುಳಿದ ವರ್ಗಗಳ ಪ್ರಮುಖ ನಾಯಕರಾದ ಶ್ರೀ ಎಂ. ನಾಗರಾಜ್ ಅವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ಇಬ್ಬರೂ ಹಿಂದುಳಿದ ವರ್ಗದ ಪ್ರಭಾವಿ ನಾಯಕರಿಗೆ ಮತ್ತು ಪಕ್ಷದ ವರಿಷ್ಠರಿಗೆ ಕೃತಜ್ಞತೆ ಸಲ್ಲಿಸಲು ಬೆಂಗಳೂರು ಮಹಾನಗರದಲ್ಲಿ ಶೀಘ್ರದಲ್ಲೇ ಬೃಹತ್ “ಅಭಿನಂದನಾ ಸಮಾವೇಶ”ವನ್ನು ಹಮ್ಮಿಕೊಳ್ಳಲು ಈ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಯಿತು.
ಸಭೆಯಲ್ಲಿ ರಾಜ್ಯ ಹಾಗೂ ಬೆಂಗಳೂರು ಮಹಾನಗರ ಒಬಿಸಿ ಮೋರ್ಚಾದ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದು, ಮುಂಬರುವ ಸಮಾವೇಶದ ಯಶಸ್ಸಿಗೆ ಕೈಗೊಳ್ಳಬೇಕಾದ ಪೂರ್ವಭಾವಿ ಸಿದ್ಧತೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು


More Stories
ತಿರುಮಲ ಪ್ರಥಮ ಆರತಿ ಶಿಷ್ಟಾಚಾರ ಪ್ರಸ್ತಾಪ ಸ್ವಾಗತಾರ್ಹ: ಸಿಎಂ ನಿರ್ಧಾರ ಬೆಂಬಲಿಸಿದ ಟಿಟಿಡಿ ಸದಸ್ಯ ಎಸ್. ನರೇಶ್ ಕುಮಾರ್
ಬೆಂಗಳೂರಿನಲ್ಲಿ ಸ್ವರ್ಣರಶ್ಮಿ ಕೌಶಲ್ಯಾಭಿವೃದ್ಧಿ ಸಂಸ್ಥೆಯ ನೂತನ ಕಟ್ಟಡದ ಭವ್ಯ ಶಿಲಾನ್ಯಾಸ: ಶ್ರೀ ಸ್ವರ್ಣವಲ್ಲಿ ಶ್ರೀಗಳಿಂದ ಚಾಲನೆ
ಬೆಂಗಳೂರು ವಿವಿಯಲ್ಲಿ ಕವಿ ಡಾ. ಸಿದ್ದಲಿಂಗಯ್ಯನವರ 5ನೇ ವರ್ಷದ ಪುಣ್ಯಸ್ಮರಣೆ