ಭಟ್ಕಳ: ತಾಲೂಕಿನ ಮುಂಡಳ್ಳಿ ಸಮೀಪದ ಕೆಪ್ಟಿಮನೆ–ಹಾವಳಿಕಂಠದಲ್ಲಿ ವ್ಯಕ್ತಿಯೊಬ್ಬರು ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ಬೆಳಕಿಗೆ ಬಂದಿದೆ.

ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಹರೀಶ ಗೋವಿಂದ ಮೋಗೇರ (35) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ಗುರುತಿಸಲಾಗಿದೆ.
ಘಟನೆಯ ವಿವರ:
ಮೃತರಾದ ಹರೀಶ ಅವರು ಕಳೆದ ಕೆಲವು ದಿನಗಳಿಂದ ವೈಯಕ್ತಿಕ ಕಾರಣಗಳಿಂದಾಗಿ ಮಾನಸಿಕವಾಗಿ ನೊಂದಿದ್ದರೆನ್ನಲಾಗಿದೆ. ಇದೇ ಬೇಸರದಲ್ಲಿ ಅವರು ತಮ್ಮ ಮನೆಯ ಅಡುಗೆ ಕೋಣೆಯ ಸೀಲಿಂಗ್ ಫ್ಯಾನ್ ಅಳವಡಿಸಲು ಹಾಕಲಾಗಿದ್ದ ಕಬ್ಬಿಣದ ರಾಡಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಘಟನೆಗೆ ಸಂಬಂಧಿಸಿದಂತೆ ಮೃತರ ಸಂಬಂಧಿ ವಾಸು ನಾಗಪ್ಪ ಮೋಗೇರ ಅವರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.


More Stories
ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ. 100 ಕ್ಕೆ 100 ಫಲಿತಾಂಶ; ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ
ವಿದೇಶಿ ಉದ್ಯೋಗದ ಆಮಿಷ ಒಡ್ಡಿ ಯುವಕನಿಗೆ ₹2.49 ಲಕ್ಷ ವಂಚನೆ: ಮೂವರ ವಿರುದ್ಧ ಪ್ರಕರಣ ದಾಖಲು!
ಅಪಘಾತ ಸ್ಥಳಕ್ಕೆ ಎಸ್ಪಿ ಭೇಟಿ; ತುರ್ತು ಸುರಕ್ಷತಾ ಕ್ರಮಕ್ಕೆ ಖಡಕ್ ಸೂಚನೆ