ಭಟ್ಕಳ: ತಾಲೂಕಿನ ಮುಟ್ಟಳ್ಳಿ-ಮೂಡಭಟ್ಕಳದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸುಸೂತ್ರವಾಗಿ ನಡೆದಿದ್ದು, ನೂತನ ಅಧ್ಯಕ್ಷರಾಗಿ ಶ್ರೀನಿವಾಸ ಶಿವರಾಮ ನಾಯ್ಕ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಸಮಿತಿಯ ಮಹತ್ವದ ಸಭೆಯಲ್ಲಿ ಮುಂಬರುವ ಸಾಲಿನ ಉತ್ಸವಕ್ಕಾಗಿ ನೂತನ ಪದಾಧಿಕಾರಿಗಳ ತಂಡವನ್ನು ರಚಿಸಲಾಯಿತು.

ನೂತನ ಪದಾಧಿಕಾರಿಗಳ ವಿವರ:
- ಅಧ್ಯಕ್ಷರು: ಶ್ರೀನಿವಾಸ ಶಿವರಾಮ ನಾಯ್ಕ ಉಪಾಧ್ಯಕ್ಷರು: ಮಂಜುನಾಥ ಕೃಷ್ಣ ನಾಯ್ಕ ಕಾರ್ಯದರ್ಶಿ: ಕುಮಾರ್ ಹನುಮಂತ ನಾಯ್ಕ ಸಹ ಕಾರ್ಯದರ್ಶಿ: ಶರತ್ ಶ್ರೀಧರ್ ನಾಯ್ಕ ಖಜಾಂಚಿ: ಕೌಶಿಕ್ ಕೃಷ್ಣ ನಾಯ್ಕ
ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ಹಾರ್ದಿಕವಾಗಿ ಅಭಿನಂದಿಸಿದರು.
ಬಳಿಕ ಜವಾಬ್ದಾರಿ ವಹಿಸಿಕೊಂಡು ಮಾತನಾಡಿದ ನೂತನ ಅಧ್ಯಕ್ಷ ಶ್ರೀನಿವಾಸ ಶಿವರಾಮ ನಾಯ್ಕ ಅವರು, “ಮುಂಬರುವ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನು ಅತ್ಯಂತ ಭಕ್ತಿಭಾವದಿಂದ, ಶಿಸ್ತುಬದ್ಧವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಉತ್ಸವದ ಯಶಸ್ಸಿಗೆ ಊರಿನ ಹಿರಿಯರು, ಸಮಿತಿಯ ಪದಾಧಿಕಾರಿಗಳು ಹಾಗೂ ಎಲ್ಲ ಸದಸ್ಯರ ಸಹಕಾರ ಅತ್ಯಗತ್ಯ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಮಾಜಿ ಅಧ್ಯಕ್ಷ ವೆಂಕಟರಮಣ ನಾಯ್ಕ, ಸುರೇಶ್ ನಾಯ್ಕ, ವೆಂಕಟೇಶ ನಾಯ್ಕ, ರವಿಚಂದ್ರನ್ ನಾಯ್ಕ, ಊರಿನ ಹಿರಿಯರಾದ ಶನಿಯಾರ ನಾಯ್ಕ, ಗಣೇಶ ನಾಯ್ಕ ಸೇರಿದಂತೆ ಸಮಿತಿಯ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವೆಂಕಟೇಶ ತಿಮಯ್ಯ ನಾಯ್ಕ ನಿರೂಪಿಸಿ, ಕೊನೆಯಲ್ಲಿ ವಂದನಾರ್ಪಣೆ ಮಾಡಿದರು.

More Stories
ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ. 100 ಕ್ಕೆ 100 ಫಲಿತಾಂಶ; ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ
ವಿದೇಶಿ ಉದ್ಯೋಗದ ಆಮಿಷ ಒಡ್ಡಿ ಯುವಕನಿಗೆ ₹2.49 ಲಕ್ಷ ವಂಚನೆ: ಮೂವರ ವಿರುದ್ಧ ಪ್ರಕರಣ ದಾಖಲು!
ಅಪಘಾತ ಸ್ಥಳಕ್ಕೆ ಎಸ್ಪಿ ಭೇಟಿ; ತುರ್ತು ಸುರಕ್ಷತಾ ಕ್ರಮಕ್ಕೆ ಖಡಕ್ ಸೂಚನೆ