ಮುರುಡೇಶ್ವರ, ಜುಲೈ 09: ಇಲ್ಲಿನ ಪ್ರತಿಷ್ಠಿತ ಬೀನಾ ವೈದ್ಯ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ಶೈಕ್ಷಣಿಕ ವರ್ಷದ ಅಂಗವಾಗಿ ವಿವಿಧ ಶೈಕ್ಷಣಿಕ ಕ್ಲಬ್ಗಳ ಉದ್ಘಾಟನಾ ಕಾರ್ಯಕ್ರಮವನ್ನು ವಿಜೃಂಭಣೆಯಿAದ ಆಯೋಜಿಸಲಾಗಿತ್ತು.

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಸೃಜನಶೀಲತೆ, ಸಂಶೋಧನಾ ಮನೋಭಾವ ಹಾಗೂ ವಿವಿಧ ವಿಷಯಗಳಲ್ಲಿ ಆಸಕ್ತಿ ಮತ್ತು ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಶಾಲೆಯ ಸೈನ್ಸ್ ಕ್ಲಬ್, ಮ್ಯಾಥ್ಸ್ ಕ್ಲಬ್, ಸೋಷಿಯಲ್ ಕ್ಲಬ್, ಇಂಗ್ಲಿಷ್ ಕ್ಲಬ್, ಟೆಕ್ನೋ ಕ್ಲಬ್, ಕನ್ನಡ ಕ್ಲಬ್, ಹಿಂದಿ ಕ್ಲಬ್ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕ್ಲಬ್ಗಳನ್ನು ಈ ಸಂದರ್ಭದಲ್ಲಿ ಉದ್ಘಾಟಿಸಲಾಯಿತು.
ಪ್ರತಿಭೆ ಮತ್ತು ಕೌಶಲ್ಯ ಅನಾವರಣಕ್ಕೆ ಕ್ಲಬ್ಗಳು ಪೂರಕ: ಡಾ. ಪುಷ್ಪಲತಾ ವೈದ್ಯ
ಕಾರ್ಯಕ್ರಮವನ್ನು ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಹಾಗೂ ನಿರ್ದೇಶಕರಾದ q?. ಪುಷ್ಪಲತಾ ಮಂಕಾಳ ವೈದ್ಯ ಅವರು ಉದ್ಘಾಟಿಸಿ ಮಾತನಾಡಿದರು. “ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೆ, ಸಹಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮಲ್ಲಿರುವ ಸುಪ್ತ ಪ್ರತಿಭೆ ಮತ್ತು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಕ್ಲಬ್ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದ್ದು, ಭವಿಷ್ಯದ ಸವಾಲುಗಳನ್ನು ಎದುರಿಸಲು ಅಗತ್ಯವಾದ ನಾಯಕತ್ವ ಹಾಗೂ ಸಂಘಟನಾ ಕೌಶಲ್ಯಗಳನ್ನು ಬೆಳೆಸುತ್ತವೆ” ಎಂದು ಅವರು ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧನೆ
ಇದೇ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ನಾಯ್ಕ್ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿ, ಕ್ಲಬ್ಗಳ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ಶಿಸ್ತು, ಬದ್ಧತೆ ಮತ್ತು ತಂಡದ ಮನೋಭಾವದೊಂದಿಗೆ ಕ್ಲಬ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ ಹಾಗೂ ಸಮಸ್ತ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.

More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ