ಹೊನ್ನಾವರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ತಾಲೂಕಿನಲ್ಲಿ ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ (ಎಸ್‌ಐಆರ್) ಕುರಿತು ಮೇಣದಬತ್ತಿ ಬೆಳಗಿಸುವ ಮೂಲಕ ವಿನೂತನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪುಟ್ಟೆಗೌಡ ಅವರು ಕಾರ್ಯಕ್ರಮಕ್ಕೆ ಮೇಣದಬತ್ತಿ ಬೆಳಗಿಸಿ ಅಧಿಕೃತವಾಗಿ ಚಾಲನೆ ನೀಡಿದರು.
ಮತದಾನದ ಮಹತ್ವ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ವಿವಿಧ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಎನ್.ಆರ್.ಎಲ್.ಎಂ. (NRLM) ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರು ಸಕ್ರಿಯವಾಗಿ ಭಾಗವಹಿಸಿ, ಉಪಸ್ಥಿತರಿದ್ದರು.
About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ