ಜಾಲಿ: ಜಾಲಿ ನಾಮಧಾರಿ ಸಮಾಜದ ಹಿರಿಯ ಮುಖಂಡರು ಹಾಗೂ ಜಾಲಿಯ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸಂಸ್ಥಾಪಕರಾದ ಶ್ರೀಯುತ ಸುಬ್ರಾಯ ದುರ್ಗಪ್ಪ ನಾಯ್ಕ್ (ಕವಾಯಿ ಮನೆ, ಜಾಲಿ) ಅವರು ಇಂದು (17-7-2026)ಮಧ್ಯಾಹ್ನ 3 ಗಂಟೆಗೆ ತಮ್ಮ ಸ್ವಗೃಹದಲ್ಲಿ ವಯೋಸಹಜ ಕಾಯಿಲೆಯಿಂದ ಸ್ವರ್ಗಸ್ಥರಾಗಿದ್ದಾರೆ ಎಂದು ತಿಳಿಸಲು ಅತ್ಯಂತ ವಿಷಾದವೆನಿಸುತ್ತಿದೆ.
ಮೃತರು ಕಂದಾಯ ಇಲಾಖೆಯಲ್ಲಿ ಸುದೀರ್ಘ ಕಾಲ ಶಾನುಭೋಗರಾಗಿ ಹಾಗೂ ಗ್ರಾಮಲೆಕ್ಕಿಗರಾಗಿ (ವಿಲೇಜ್ ಅಕೌಂಟೆಂಟ್) ಜನಪರ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ತಮ್ಮ ಅಧಿಕಾರಾವಧಿಯಲ್ಲಿ ಹಾಗೂ ನಿವೃತ್ತಿಯ ನಂತರವೂ ಸಮಾಜದ ಧಾರ್ಮಿಕ, ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಸಾರ್ವಜನಿಕ ಗಣೇಶೋತ್ಸವ ಸಮಿತಿಯನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಅವರ ನಿಧನಕ್ಕೆ ಸಮಾಜದ ಗಣ್ಯರು, ಕಂದಾಯ ಇಲಾಖೆಯ ಸಹೋದ್ಯೋಗಿಗಳು ಹಾಗೂ ಊರಿನ ಪ್ರಮುಖರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ, ಹಿತೈಷಿಗಳಿಗೆ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ