ಭಟ್ಕಳ: ನಗರದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ 2025-26 ನೇ ಸಾಲಿನ ಬಿ.ಎಡ್. ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕಾಲೇಜಿಗೆ ಶೇಕಡಾ 100 ಕ್ಕೆ 100 ರಷ್ಟು ಅತ್ಯುತ್ತಮ ಫಲಿತಾಂಶ ಬಂದಿದೆ.







ಪ್ರಥಮ ಸೆಮಿಸ್ಟರ್ ಸಾಧಕರು:
ಪ್ರಥಮ ಸೆಮಿಸ್ಟರ್‌ನಲ್ಲಿ ಮಹಾವಿದ್ಯಾಲಯದ ಚಂದನಾ ಸುರೇಶ್ ನಾಯ್ಕ್ ಶೇ. 92 ಅಂಕಗಳೊAದಿಗೆ ಪ್ರಥಮ ಸ್ಥಾನ, ಸ್ವಾತಿ ದತ್ತಾತ್ರೇಯ ನಾಯ್ಕ್ ಶೇ. 89.67 ಅಂಕಗಳೊAದಿಗೆ ದ್ವಿತೀಯ ಸ್ಥಾನ ಮತ್ತು ಕಾವ್ಯ ಮಾದೇವ ಗೊಂಡ ಶೇ. 89.17 ಅಂಕಗಳೊAದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ.
ತೃತೀಯ ಸೆಮಿಸ್ಟರ್ ಸಾಧಕರು:
ತೃತೀಯ ಸೆಮಿಸ್ಟರ್‌ನಲ್ಲಿ ಮಹಾವಿದ್ಯಾಲಯದ ಸಿಂಚನಾ ತಿಮ್ಮಪ್ಪ ಮಡಿವಾಳ ಶೇ. 91.67 ಅಂಕಗಳೊAದಿಗೆ ಪ್ರಥಮ ಸ್ಥಾನ, ಲತಾ ಗಣಪತಿ ದೇವಾಡಿಗ ಶೇ. 91.17 ಅಂಕಗಳೊAದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಹಾಗೆಯೇ ಸಂಕಲ್ಪ ಆರ್. ಮತ್ತು ಕಾವ್ಯಾ ರಮೇಶ್ ಕಿಮಾಣಿಕರ್ ಶೇ. 90.83 ಅಂಕಗಳೊAದಿಗೆ ಜಂಟಿಯಾಗಿ ತೃತೀಯ ಸ್ಥಾನ ಗಳಿಸಿದ್ದಾರೆ.
ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ವಿದ್ಯಾರ್ಥಿಗಳು ತಮ್ಮ ಕಾಲೇಜಿಗೆ ಹಾಗೂ ಪಾಲಕರಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಮಹೋನ್ನತ ಸಾಧನೆಗೆ ಭಟ್ಕಳ ಎಜುಕೇಶನ್ ಟ್ರಸ್ಟ್ನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾರ್ದಿಕವಾಗಿ ಅಭಿನಂದಿಸಿದ್ದಾರೆ

About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ