ಭಟ್ಕಳ: ಮನೆಯ ಅಂಗಳದಲ್ಲಿ ನಿಲ್ಲಿಸಲಾಗಿದ್ದ ಪಲ್ಸರ್ ಬೈಕ್ ಕಳವು ಮಾಡಿದ್ದ ಪ್ರಕರಣವನ್ನು ಭಟ್ಕಳ ಗ್ರಾಮೀಣ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಆತನಿಂದ ಕಳುವಾಗಿದ್ದ ಬೈಕನ್ನು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ವಾಹನ:
ಬಜಾಜ್ ಪಲ್ಸರ್ ಎನ್‌ಎಸ್ 200 (Bajaj Pulsar NS 200) KA-47 X-0623 (ಪರ್ಲ್ ಮೆಟಾಲಿಕ್ ಬಣ್ಣ)ಅಂದಾಜು ಮೌಲ್ಯ: ₹70,000
ಬೆಳಕೆಯ ಜನತಾ ಕಾಲೋನಿ ನಿವಾಸಿ ಲೋಹಿತ್ ಸುಬ್ಬಯ್ಯ ಮೊಗೇರ (26) ಎಂಬುವವರು ಹೆಬಳೆ ಗ್ರಾಮದ ನೆರ್ಲೆಸರ್‌ನಲ್ಲಿರುವ ತಮ್ಮ ಮನೆಯ ಅಂಗಳದಲ್ಲಿ ಬೈಕ್ ನಿಲ್ಲಿಸಿದ್ದರು. ದುಷ್ಕರ್ಮಿಗಳು ಅಂಗಳದಲ್ಲಿದ್ದ ಬೈಕನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು ತಕ್ಷಣವೇ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ: ಸೈಯದ್ ಅಲಿ (22), ತಂದೆ: ಸೈಯದ್ ರೆಹಮತುಲ್ಲಾ, ಹೆಬಳೆ 4ನೇ ಕ್ರಾಸ್, ಫಿರ್ದೋಸ್ ನಗರ, ಭಟ್ಕಳ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎನ್.ಎಂ., ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ ಹಾಗೂ ಡಿವೈಎಸ್ಪಿ ಗಿರೀಶ ಬಿ. ಅವರ ಮಾರ್ಗದರ್ಶನದಲ್ಲಿ, ಭಟ್ಕಳ ಗ್ರಾಮೀಣ ಸಿಪಿಐ ವೆಂಕಟೇಶ ಮುರನಾಳ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ರೂಪಿಸಲಾಗಿತ್ತು.
ತನಿಖಾಧಿಕಾರಿ ಪಿಎಸೈ ಭರಮಪ್ಪ ಬೆಳಗಲಿ ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳ ತಂಡ ಆರೋಪಿಯನ್ನು ಸೆರೆಹಿಡಿದಿದೆ. ಯಶಸ್ವಿ ಕಾರ್ಯಾಚರಣೆ ನಡೆಸಿದ ಇಡೀ ತಂಡವನ್ನು ಜಿಲ್ಲಾ ಪೊಲೀಸ್ ಉನ್ನತಾಧಿಕಾರಿಗಳು ಅಭಿನಂದಿಸಿದ್ದಾರೆ.
ಸಿಬ್ಬಂದಿಗಳಾದ ಗೊಂಡ, ಈರಣ್ಣ ಪೂಜೇರಿ, ಬಾಗಪ್ಪ ಕಡಕಲ್ ಮತ್ತು ನಿಂಗನಗೌಡ ಪಾಟೀಲ ಇದ್ದರು.

More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ