

ಕೂಡ್ಲಿಗಿ (ವಿಜಯನಗರ): “ಕೂಡ್ಲಿಗಿ ಕ್ಷೇತ್ರದ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಅವರು ಅಪಾರ ಸಂಘಟನಾ ಚತುರರಾಗಿದ್ದು, ಜನಪ್ರಿಯ ಮಾದರಿ ಶಾಸಕರಾಗಿ ಜನಮನ ಗೆದ್ದಿದ್ದಾರೆ,” ಎಂದು ಎಐಸಿಸಿ (AICC) ಕಾರ್ಯದರ್ಶಿ ಹಾಗೂ ಪಕ್ಷದ ವೀಕ್ಷಕರಾದ ಹರ್ಕರ್ ವೇಣುಗೋಪಾಲ್ ರಾವ್ ಪ್ರಶಂಸಿಸಿದರು.
ಜುಲೈ 30ರಂದು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ವಿವಿಧ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಪ್ರಮುಖ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
ಕೇಂದ್ರ ಸರ್ಕಾರದ ವಿರುದ್ಧ ವೀಟೋ ವೀಕ್ಷಕರು ತೀವ್ರ ವಾಗ್ದಾಳಿ ನಡೆಸಿ, “ಕೇಂದ್ರ ಸರ್ಕಾರವು ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಮೂಲಕ ದೇಶದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದೆ. ಇದನ್ನು ಖಂಡಿಸಿ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಿರಂತರ ಹೋರಾಟ ನಡೆಯುತ್ತಿದೆ. ದೇಶದ ಜನರು ಪ್ರಜ್ಞಾವಂತರಾಗಿದ್ದು, ಮುಂದಿನ ದಿನಗಳಲ್ಲಿ ಮೋದಿ ಹಾಗೂ ಅಮಿತ್ ಶಾ ನೇತೃತ್ವದ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ,” ಎಂದರು.

ಪಕ್ಷದ ಸಂಘಟನೆ ಕುರಿತು ಸುದೀರ್ಘ ಚರ್ಚೆ:
ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ನಾಯಕರ ಅಭಿಪ್ರಾಯಗಳು ಮತ್ತು ಸಲಹೆ-ಸೂಚನೆಗಳನ್ನು ಆಲಿಸಲಾಯಿತು. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಗಣ್ಯರು ಸುದೀರ್ಘ ಚರ್ಚೆ ನಡೆಸಿದರು.

ವೇದಿಕೆಯಲ್ಲಿ ಕೆಪಿಸಿಸಿ ವೀಕ್ಷಕರಾದ ಮರಿಯೋಜಿರಾವ್, ಶ್ರೀಮತಿ ಆರತಿ ಚಂದ್ರಶೇಖರ್, ಕೆಪಿಸಿಸಿ ಕಾರ್ಯದರ್ಶಿ ಹಾಗೂ ಶಾಸಕ ಸುಭಾಷ್ ರಾಥೋಡ್, ವಿಜಯನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಶಿರಾಜ್ ಶೇಖ್ ಮತ್ತು ಕೂಡ್ಲಿಗಿ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಉಪಸ್ಥಿತರಿದ್ದು ಮಾತನಾಡಿದರು.
ಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಕಾವಲ್ಲಿ ಶಿವಪ್ಪನಾಯ್ಕ, ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಮ್. ಗುರುಸಿದ್ದನಗೌಡ ಹಾಗೂ ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಜಿ. ಕುಮಾರ್ ಅವರು ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
ಈ ಅಭಿಯಾನದಲ್ಲಿ ಪಕ್ಷದ ವಿವಿಧ ವಿಭಾಗಗಳ ಪ್ರಮುಖರು, ತಾಲೂಕಿನಾದ್ಯಂತ ಆಗಮಿಸಿದ್ದ ನೂರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.
ವರದಿ: ವಂದೇ ಮಾತರಂ ವಿ. ಜಿ. ವೃಷಭೇಂದ್ರ, ಕೂಡ್ಲಿಗಿ

About The Author




More Stories
ಸಾರ್ವಜನಿಕ ಆಸ್ಪತ್ರೆ ಆವರಣದಲ್ಲೇ ‘ತಾಯಿ-ಮಕ್ಕಳ ಆಸ್ಪತ್ರೆ’ ನಿರ್ಮಾಣಕ್ಕೆ ಸಾರ್ವಜನಿಕರ ಒತ್ತಾಯ – ಶಾಸಕರ ನಿರ್ಧಾರಕ್ಕೆ ಶ್ಲಾಘನೆ
ಶೇ. 33 ಮೀಸಲಾತಿ ನಮ್ಮ ಹಕ್ಕು: ಕೂಡ್ಲಿಗಿಯಲ್ಲಿ ಜನವಾದಿ ಮಹಿಳಾ ಸಂಘದಿಂದ ಬೃಹತ್ ಪ್ರತಿಭಟನೆ ಹಾಗೂ ಹಕ್ಕೊತ್ತಾಯ
ಅನಿಯಮಿತ ದಂಡ ವಸೂಲಾತಿ ಕಿರುಕುಳ ನಿಲ್ಲಿಸಿ: ಜೆಸ್ಕಾಂಗೆ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ತಾಕೀತು