August 23, 2026

ಬೆಳಗಾವಿಯಲ್ಲಿ ಶ್ರೀ ಶಿವಶರಣ ಹಡಪದ ಅಪ್ಪಣ್ಣ ಜಯಂತಿ: ಭಾವಚಿತ್ರ ಮೆರವಣಿಗೆಗೆ ಅದ್ಧೂರಿ ಚಾಲನೆ!

ಬೆಳಗಾವಿ:  ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರದಲ್ಲಿ ನಿಜಸುಖಿ ಶ್ರೀ ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಉತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ದಿವ್ಯ ಭಾವಚಿತ್ರ ಮೆರವಣಿಗೆ ಕಾರ್ಯಕ್ರಮಕ್ಕೆ ಅತ್ಯಂತ ಶ್ರದ್ಧಾ-ಭಕ್ತಿಯಿಂದ ಚಾಲನೆ ನೀಡಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಬೆಳಗಾವಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು.
ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಲೋಕಸಭಾ ಸದಸ್ಯರಾದ ಜಗದೀಶ್ ಶೆಟ್ಟರ್ ಅವರು ಭಾಗವಹಿಸಿ ಮೆರವಣಿಗೆಗೆ ಶುಭಕೋರಿದರು. ಈ ಸಂದರ್ಭದಲ್ಲಿ ಹಡಪದ ಸಮಾಜದ ರಾಜ್ಯ ಅಧ್ಯಕ್ಷರಾದ ದೇವು ಮುಂಡರಗಿ, ರಾಜ್ಯ ಉಪಾಧ್ಯಕ್ಷರಾದ ಸುರೇಶ್ ಹಡಪದ, ಲಕ್ಷ್ಮಣ ಹಡಪದ ಹಾಗೂ ಸಮಾಜದ ಪ್ರಮುಖರು, ವಿವಿಧ ತಾಲೂಕು ಮತ್ತು ಜಿಲ್ಲಾ ಮಟ್ಟದ ಪದಾಧಿಕಾರಿಗಳು ಹಾಗೂ ಸಾವಿರಾರು ಕಲಾಭಿಮಾನಿ ಬಂಧುಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಶ್ರೀ ಭೀಮಶಂಕರ ಹಡಪದ, ಶ್ರೀ ಸಂತೋಷ ಹಡಪದ, ಡಾ. ಸೋನಾಲಿ ಸರನೋಬತ, ಶ್ರೀಮತಿ ವಿದ್ಯಾವತಿ ಭಜಂತ್ರಿ, ಶ್ರೀ ಅಪ್ಪು ಹಡಪದ ಸೇರಿದಂತೆ ಸಂಘಟನೆಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸಂಘಟನಾ ಕಾರ್ಯದರ್ಶಿಗಳು ಹಾಗೂ ಹಡಪದ ಸಮಾಜದ ನೂರಾರು ಮುಖಂಡರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವರದಿ: ಮಹೇಶ್ ಶರ್ಮಾ

About The Author

error: Content is protected !!