

ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾದ ನಂದನ್.

ಯೋಗ ಸಾಧಕನಿಗೆ ವೈಯಕ್ತಿಕ ಧನಸಹಾಯ ನೀಡಿದ ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ.

ಸೆಪ್ಟೆಂಬರ್ 4 ರಿಂದ 9 ರವರೆಗೆ ನಡೆಯಲಿದೆ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆ.

ಶಿರಸಿ: ಆಧ್ಯಾತ್ಮಿಕ ಯೋಗದಲ್ಲಿ ಉತ್ತಮ ಸಾಧನೆ ಮಾಡಿ ‘ಏಷ್ಯಾ ಪೆಸಿಫಿಕ್ ಯೋಗ ಕಾಂಪಿಟೇಷನ್’ನಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶ ಪಡೆದ ನಂದನ್ ನರಸಿಂಹ ಭಟ್ ಜಿಲ್ಲೆಗೆ ಹೆಮ್ಮೆ ತಂದಿದ್ದಾನೆ ಎಂದು ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಂತಾರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗೆ ತಮ್ಮ ವೈಯಕ್ತಿಕ ನೆರವಿನ ಸಹಾಯಧನ ವಿತರಿಸಿ ಅವರು ಮಾತನಾಡಿದರು.


“ಕರ್ನಾಟಕದಿಂದ ಆಯ್ಕೆಯಾದ ಕೆಲವೇ ಸ್ಪರ್ಧಿಗಳಲ್ಲಿ ನಮ್ಮ ಉತ್ತರ ಕನ್ನಡ ಜಿಲ್ಲೆಯ ಯುವಕ ಪ್ರತಿನಿಧಿಸುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ಸೆಪ್ಟೆಂಬರ್ 4 ರಿಂದ 9 ರವರೆಗೆ ನಡೆಯಲಿರುವ ಈ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿರುವ ರಾಜ್ಯ ಹಾಗೂ ಜಿಲ್ಲೆಯ ಎಲ್ಲಾ ಸ್ಪರ್ಧಿಗಳಿಗೂ ಶುಭ ಹಾರೈಸುತ್ತೇನೆ” ಎಂದು ಅನಂತಮೂರ್ತಿ ಹೆಗಡೆ ಹೇಳಿದರು.
ನಿರತ ಅಭ್ಯಾಸ ಮತ್ತು ಏಕಾಗ್ರತೆ: ತಮ್ಮ ಸಾಧನೆಯ ಕುರಿತು ಮಾತನಾಡಿದ ನಂದನ್ ನರಸಿಂಹ ಭಟ್, “ರಾಜ್ಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ನಂತರ ಉತ್ತರಾಖಂಡದಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಗಳಿಸುವ ಮೂಲಕ ಈಗ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದೇನೆ. ಕಳೆದ 4 ವರ್ಷಗಳಿಂದ ಸತತ ಯೋಗ ಅಭ್ಯಾಸ ಮಾಡುತ್ತಿದ್ದು, ತಂದೆ-ತಾಯಿ ನಿರಂತರ ಬೆಂಬಲ ನೀಡಿದ್ದಾರೆ. ಯೋಗದಿಂದ ಮನಸ್ಸಿನ ಏಕಾಗ್ರತೆ ಹೆಚ್ಚಿ ಶಿಕ್ಷಣಕ್ಕೂ ಪೂರಕವಾಗಿದೆ. ಮುಂದೆ ಬಿ.ಎಸ್.ಸಿ ಯೋಗ ಮಾಡಿ ಇದೇ ಕ್ಷೇತ್ರದಲ್ಲಿ ಮುಂದುವರಿಯುವ ಇಚ್ಛೆಯಿದೆ” ಎಂದರು.
About The Author




More Stories
ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ರ್ಯಾಲಿ: ಸೆ.5ಕ್ಕೆ ಶಿರಸಿಯಲ್ಲಿ ಆಕ್ಷೇಪಣಾ ಪತ್ರ ಸಲ್ಲಿಕೆ – ರವೀಂದ್ರ ನಾಯ್ಕ
‘ಕಾಪ್ ಆಫ್ ಮಂತ್’ ಪ್ರಶಸ್ತಿಗೆ ಶಂಕರಮೂರ್ತಿ ನಾಯ್ಕ ಆಯ್ಕೆ.
ಕಸ್ತೂರಿ ರಂಗನ್ 7ನೇ ಅಧಿಸೂಚನೆಗೆ ತೀವ್ರ ವಿರೋಧ: ಜಿಲ್ಲಾದ್ಯಂತ ಲಕ್ಷಕ್ಕೂ ಮಿಕ್ಕಿ ಉಚಿತ ಆಕ್ಷೇಪಣಾ ಪತ್ರ ಸಲ್ಲಿಕೆಗೆ ನಿರ್ಧಾರ – ರವೀಂದ್ರ ನಾಯ್ಕ