August 23, 2026

ಕಾಂಗ್ರೆಸ್ ಮಹಿಳಾ ವಿರೋಧಿ ಪಕ್ಷ: ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಟೀಕೆ

ಚಿಕ್ಕೋಡಿ: ಕಾಂಗ್ರೆಸ್ ಮಹಿಳಾ ವಿರೋಧಿ ಪಕ್ಷವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಸಚಿವ ಸ್ಥಾನಗಳನ್ನು ನೀಡದೇ ಕಡೆಗಣಿಸಿರುವುದು ಸರಿಯಲ್ಲ ಎಂದು ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಗಂಭೀರವಾಗಿ ಆರೋಪಿಸಿದ್ದಾರೆ.

ಲಕ್ಷ್ಮೀ ಹೆಬ್ಬಾಳಕರ್ ಸಚಿವ ಸ್ಥಾನ ಹಿಂಪಡೆದು ಅನ್ಯಾಯ:

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಳಗಾವಿಯ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಮಹಿಳಾ ಕೋಟಾದಲ್ಲಿ ನೀಡಿದ್ದ ಸಚಿವ ಸ್ಥಾನವನ್ನು ಹಿಂಪಡೆಯುವ ಮೂಲಕ ಕಾಂಗ್ರೆಸ್ ಮಹಿಳೆಯರಿಗೆ ಅನ್ಯಾಯ ಮಾಡಿದೆ. ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ನಿಜವಾದ ಅಧಿಕಾರ ಹಾಗೂ ಸ್ಥಾನಮಾನ ನೀಡದೆ ಕೇವಲ ಸಾಂಕೇತಿಕವಾಗಿ ಬಳಸಿಕೊಳ್ಳುತ್ತಿದೆ” ಎಂದು ಕಿಡಿಕಾರಿದರು.

ಮಹಿಳೆಯರ ಸುರಕ್ಷತೆಯಲ್ಲಿ ಎರಡೂ ಪಕ್ಷಗಳು ವಿಫಲ:

ಮಹಿಳೆಯರಿಗೆ ಸಮಾನ ಅವಕಾಶ ಹಾಗೂ ಸುರಕ್ಷತೆ ನೀಡುವಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಟೀಕಿಸಿದ ಅವರು, ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಮಹಿಳಾ ಸಬಲೀಕರಣ ಮತ್ತು ಸುರಕ್ಷತೆಗೆ ಆದ್ಯತೆ ನೀಡುವುದಿಲ್ಲ. ಬದಲಾಗಿ ಕೇವಲ ಮತಬ್ಯಾಂಕ್‌ಗಾಗಿ ಮಹಿಳೆಯರನ್ನು ಬಳಸಿಕೊಳ್ಳುತ್ತದೆ, ಇದು ಮಹಿಳಾ ಕುಲಕ್ಕೆ ಎಸಗಿದ ದ್ರೋಹ ಎಂದು ಹೇಳಿದರು.                       ವರದಿ: ಮಹೇಶ್ ಶರ್ಮಾ

About The Author

error: Content is protected !!