

ಹೊನ್ನಾವರ: 2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಕೇಂದ್ರ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ಇಲಾಖೆ (DSERT) ಬೆಂಗಳೂರು ಇವರ ಸಹಯೋಗದಲ್ಲಿ ನಡೆಸಲಾದ ಎನ್.ಎಮ್.ಎಮ್.ಎಸ್. (NMMS) ಪರೀಕ್ಷೆಯಲ್ಲಿ ತಾಲೂಕಿನ ಕರ್ಕಿಯ ಶ್ರೀ ಚನ್ನಕೇಶವ ಪ್ರೌಢಶಾಲೆಯ ಐದು ವಿದ್ಯಾರ್ಥಿಗಳು ಉತ್ತೀರ್ಣರಾಗಿ ಸಾಧನೆ ಮಾಡಿದ್ದಾರೆ.

ರೂ. 48,000 ಶಿಷ್ಯವೇತನ ಪಡೆಯಲು ಅರ್ಹತೆ:
ಎಂಟನೇ ತರಗತಿಯ ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದಲ್ಲಿ ನೀಡಲಾಗುವ ಈ ಶಿಷ್ಯವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ, 9ನೇ ತರಗತಿಯಿಂದ ಪಿಯುಸಿ ವರೆಗೆ ಪ್ರತಿ ವರ್ಷ 12,000 ರೂಪಾಯಿಯಂತೆ ಒಟ್ಟು ನಾಲ್ಕು ವರ್ಷಗಳಲ್ಲಿ 48,000 ರೂಪಾಯಿ ಶಿಷ್ಯವೇತನ ದೊರೆಯಲಿದೆ.

ಸಾಧಕ ವಿದ್ಯಾರ್ಥಿಗಳು: ನಂದನ ಬಿ. ಗೌಡ, ಜೀವನ್ ಆರ್. ನಾಯ್ಕ, ಹರಿಓಂ ಆರ್. ಮೇಸ್ತ, ಧನ್ಯ ಟಿ. ಗೌಡ, ದಿವ್ಯ ಡಿ. ಗೌಡ
ಸಾಧಕರಿಗೆ ಅಭಿನಂದನೆ: ಉತ್ತೀರ್ಣರಾಗಿ ಶಾಲೆಗೆ ಹಾಗೂ ತಾಲೂಕಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ಭಜಂತ್ರಿ, ಕ್ಷೇತ್ರ ಸಮನ್ವಯಾಧಿಕಾರಿ ಜಯಶ್ರೀ ನಾಯ್ಕ, ಆಡಳಿತ ಮಂಡಳಿಯ ಅಧ್ಯಕ್ಷ ಗಜಾನನ ಹೆಗಡೆ, ಮುಖ್ಯಾಧ್ಯಾಪಕ ಎಲ್.ಎಮ್. ಹೆಗಡೆ, ಶಾಲೆಯ ಸಿಬ್ಬಂದಿವರ್ಗ ಹಾಗೂ ಊರಿನ ನಾಗರಿಕರು ಆತ್ಮೀಯವಾಗಿ ಅಭಿನಂದಿಸಿದ್ದಾರೆ.

About The Author




More Stories
ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜು ಪ್ರಥಮ, ರಾಜ್ಯ ಮಟ್ಟಕ್ಕೆ ಆಯ್ಕೆ!
ಡಿ. ದೇವರಾಜ ಅರಸು 111ನೇ ಜನ್ಮದಿನಾಚರಣೆ: ಸಾಧಕರ ಸ್ವಗೃಹದಲ್ಲೇ ಸನ್ಮಾನಿಸಿ ಗೌರವಿಸಿದ ಅರಸು ವಿಚಾರ ವೇದಿಕೆ.
ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರ: ಹೊನ್ನಾವರದಲ್ಲಿ ಮಾಜಿ ಸಿಎಂ ಜನ್ಮದಿನಾಚರಣೆ.